ಮಂಗಳವಾರ, ಏಪ್ರಿಲ್ 7, 2020
19 °C
ವಿಡಿಯೊ ಸುದ್ದಿ

ಲಾಕ್‌ಡೌನ್ ಮಧ್ಯೆಯೂ ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಜನಜಂಗುಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Mysore MG road market

ಮೈಸೂರು: ಕೊರೊನಾ‌‌ ವೈರಸ್ ಹರಡುವಿಕೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿರುವ ಮಧ್ಯೆಯೂ ಎಂದಿನಂತೆ ಸಾರ್ವಜನಿಕರು ಗುಂಪುಗೂಡಿ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಖರೀದಿ ಮಾಡುತ್ತಿದ್ದ ದೃಶ್ಯ ಶುಕ್ರವಾರ ಕಂಡು ಬಂತು.

ಈ ಮಾರುಕಟ್ಟೆಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ಭರದಿಂದ ಸಾಗಿದೆ. ಗಿಡಗಂಟಿಗಳು ಬೆಳೆದಿದ್ದರಿಂದ ವ್ಯಾಪಾರ ಮಾಡಲು ಕಷ್ಟ ಎಂದು ವ್ಯಾಪಾರಿಗಳು ದೂರಿದರು. ಹಾಗಾಗಿ, ಜೆಸಿಬಿ ಯಂತ್ರಗಳ ಸಹಾಯದಿಂದ ಗಿಡಗಂಟಿಗಳನ್ನು ತೆರವು ಮಾಡಲಾಗುತ್ತಿದೆ. ಸಂಜೆ ಹೊತ್ತಿಗೆ ಈ ಕಾರ್ಯ ಮುಗಿಯಲಿದ್ದು, ಶನಿವಾರ ಸಂಪೂರ್ಣ ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಬನ್ನೂರಿನಲ್ಲಿ ಸದಾ ಗಿಜಿಗುಡುತ್ತಿದ್ದ ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿ, ಕೆಲವೇ ಮಂದಿಯನ್ನು ಒಳಗೆ ಬಿಡಲಾಗುತ್ತಿದೆ.

ನಗರದಲ್ಲಿ ರಸ್ತೆಬದಿ ತಂಗಿದ್ದ ಸುಮಾರು ನೂರಕ್ಕೂ ಅಧಿಕ ಮಂದಿಯನ್ನು ಇಲ್ಲಿನ ಯೂತ್ ಹಾಸ್ಟೆಲ್‌ಗೆ ಪಾಲಿಕೆ ರವಾನಿಸುತ್ತಿದೆ. 120 ಮಂದಿಗೆ ಇಲ್ಲಿ ಅವಕಾಶ ಇದ್ದು, ಇನ್ನುಳಿದವರನ್ನು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಇರಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ ಹೆಗಡೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು