ಮಂಗಳವಾರ, ಜೂನ್ 2, 2020
27 °C

 ಕೊರೊನಾ ವೈರಸ್ ಭೀತಿ: 203 ವಿಚಾರಣಾಧೀನ ಕೈದಿಗಳಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೊರೊನಾ ವೈರಸ್ ಹರಡುವಿಕೆ ತಡೆಯುವ ಹಿನ್ನೆಲೆಯಲ್ಲಿ ಏಳು ವರ್ಷಕ್ಕಿಂತ ಕಡಿಮೆ ಅವಧಿಗೆ ಶಿಕ್ಷೆ ವಿಧಿಸಬಹುದಾದ ಅಪರಾಧ ಕೃತ್ಯದಡಿಯ ವಿಚಾರಣಾಧೀನ ಕೈದಿಗಳಿಗೆ ಮಧ್ಯಂತರ ಜಾಮೀನು ನೀಡುವ ಪ್ರಕಿಯೆ ಆರಂಭವಾಗಿದೆ.

ರಾಜ್ಯದ ವಿವಿಧ ಜೈಲುಗಳಲ್ಲಿರುವ ಒಟ್ಟು 203 ವಿಚಾರಣಾಧೀನ ಕೈದಿಗಳಿಗೆ ಸ್ಥಳೀಯ ಜಿಲ್ಲಾ ನ್ಯಾಯಾಲಯಗಳು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿವೆ.

ಬೀದರ್ 7, ದಾವಣಗೆರೆ 21, ಚಿತ್ರದುರ್ಗ 8, ಕೊಡಗು 11, ಧಾರವಾಡ 21, ವಿಜಯಪುರ 10, ಬಾಗಲಕೋಟೆ 23, ಮೈಸೂರು 70, ಮಂಡ್ಯ 14, ಚಿತ್ರದುರ್ಗ 18 ಮಂದಿ ವಿಚಾರಣಾಧೀನ ಕೈದಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. 

ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಬಸವರಾಜು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು