ಗುರುವಾರ , ಏಪ್ರಿಲ್ 9, 2020
19 °C

ಕೋವಿಡ್‌–19ಗೆ ದೇಶದಲ್ಲಿ ಮೊದಲ ಬಲಿ: ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 (ಕೊರೊನಾ) ಸೋಂಕು ಪೀಡಿತ ಕಲಬುರ್ಗಿ ನಗರದ 76 ವರ್ಷದ ವೃದ್ಧ ನಿವಾಸಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಖಚಿತಪಡಿಸಿದ್ದಾರೆ.

ಕೊರೊನಾ ಸೋಂಕಿನಿಂದಲ್ಲೇ ವೃದ್ಧಿ ಮೃತಪಟ್ಟಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೃಢಪಡಿಸಿರುವ ಬಗ್ಗೆ ಜಿಲ್ಲಾಧಿಕಾರಿ ಬಿ. ಶರತ್‌ ಮಾಹಿತಿ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ #COVID19 ಶಂಕಿತರಿಗೆ ಸೋಂಕು ತಗಲಿದ್ದು ಖಚಿತವಾಗಿದೆ. ವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಿ ನಿಗಾವಹಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವೀಟ್‌ ಮಾಡಿದ್ದಾರೆ. 

ಇದನ್ನೂ ಓದಿ... ವ್ಯಕ್ತಿ ಸಾವು: ಕೊರೊನಾ ಕಾರಣವಲ್ಲ, ಜಿಲ್ಲಾಧಿಕಾರಿ ಸ್ಪಷ್ಟನೆ 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು