ಬಳ್ಳಾರಿ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೃದ್ಧೆಯು ಕೊರೊನಾಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ನಗರದಲ್ಲಿ ಗುರುವಾರ ವೈದ್ಯರೊಂದಿಗೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಲಬುರ್ಗಿಯ ಈ ಮುಂಚೆ ಮೃತಪಟ್ಟವರು ಸೇರಿದಂತೆ ಈಗ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ ಎಂದರು.

ರಾಜ್ಯದಲ್ಲಿ ಇದುವರೆಗೆ 1.30 ಲಕ್ಷ ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು,214 ಮಂದಿಯನ್ನು ಪ್ರತ್ಯೇಕ ವಾರ್ಡ್ ನಲ್ಲಿರಿಸಲಾಗಿದೆ. 2500 ಮಂದಿಯ ಗಂಟಲು ದ್ರವವನ್ನು ಸಂಗ್ರಹಿಸಲಾಗಿದ್ದು,2248 ಮಂದಿಗೆ ಸೋಂಕಿಲ್ಲ. ಆದರೆ 52 ಮಂದಿಗೆ ಸೋಂಕಿದೆ ಎಂದು ತಿಳಿಸಿದರು.

ಲಾಕ್ಡೌನ್ ನಿಯಮ ಮೀರಿ ಬೀದಿಗೆ ಬರುತ್ತಿರುವವರನ್ನು ಹಿಮ್ಮೆಟ್ಟಿಸಲು ಪೊಲೀಸರು ಲಾಠಿ ಬೀಸುತ್ತಿದ್ದಾರೆ. ಅದಕ್ಕೆ ಮುನ್ನವೇ ಜನ ಎಚ್ಚೆತ್ತುಕೊಳ್ಳಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.