ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 427 ತಲುಪಿದ ಕೋವಿಡ್‌–19 ಪ್ರಕರಣ; 131 ಸೋಂಕಿತರು ಗುಣಮುಖ

Last Updated 22 ಏಪ್ರಿಲ್ 2020, 12:06 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್‌ 21ರ ಸಂಜೆ 5ರಿಂದ ಏಪ್ರಿಲ್‌ 22ರ ಸಂಜೆ 5ರವರೆಗೂ 7 ಹೊಸ ಕೊರೊನಾ ವೈರಸ್‌ ಪತ್ತೆಯಾಗಿವೆ.

ನಾಲ್ಕು ತಿಂಗಳ ಮಗುವಿಗೂ ಕೊರೊನಾ ವೈರಸ್ ಸೋಂಕು ತಗುಲಿದ್ದು, ಈವರೆಗೂ ಒಟ್ಟು 427 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿವೆ. ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. 131 ಜನರು ಗುಣಮುಖರಾಗಿದ್ದಾರೆ.

ಬೆಂಗಳೂರು ನಗರದ 54 ವರ್ಷ ಮತ್ತು 28 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಲಬುರ್ಗಿಯ ಐವರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ನಂಜನಗೂಡಿನಲ್ಲಿ ಮತ್ತೆ ಇಬ್ಬರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಸಂಜೆಯ ಹೆಲ್ತ್‌ ಬುಲೆಟಿನಲ್ಲಿ ತಿಳಿಸಿದೆ.

ನಾಲ್ಕು ತಿಂಗಳ ಮಗು ಸೇರಿದಂತೆ ಕಲಬುರ್ಗಿ ಜಿಲ್ಲೆಯಲ್ಲಿ ಬುಧವಾರ ‌ಮತ್ತೆ ಐವರಿಗೆ ಕೋವಿಡ್ 19 ದೃಢಪಟ್ಟಿದೆ. 46 ವರ್ಷದ ಮಹಿಳೆ, 57 ವರ್ಷದ ಪುರುಷ, 36 ವರ್ಷದ ಮಹಿಳೆ ಹಾಗೂ 25 ವರ್ಷದ ಮಹಿಳೆಯಲ್ಲಿ ‌ಸೋಂಕು ಕಾಣಿಸಿಕೊಂಡಿದೆ. 25 ವರ್ಷದ ಮಹಿಳೆ ನಾಲ್ಕು ತಿಂಗಳ ಮಗುವಿನ ತಾಯಿಯಾಗಿದ್ದು, ಅವರನ್ನು ‌ಕಲಬುರ್ಗಿಯ ಇಎಸ್ಐಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ‌ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35ಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT