ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ ಕೊರೋನಾ ಶಂಕೆ: ಮೂವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ

15ದಿನಗಳ ಹಿಂದೆ ಚೀನಾಗೆ ತೆರಳಿ ವಾಪಾಸಾಗಿದ್ದರು; ಗಂಟಲು ಸೋಂಕು, ಶೀತ ಲಕ್ಷಣಕ್ಕೆ ಚಿಕಿತ್ಸೆ
Last Updated 7 ಫೆಬ್ರುವರಿ 2020, 17:08 IST
ಅಕ್ಷರ ಗಾತ್ರ

ಉಡುಪಿ: 15 ದಿನಗಳ ಹಿಂದೆ ಚೀನಾದಿಂದ ವಾಪಾಸಾಗಿದ್ದ ಮೂವರಲ್ಲಿ ಗಂಟಲು ಸೋಂಕು, ಶೀತ ಲಕ್ಷಣಗಳು ಕಾಣಿಸಿಕೊಂಡಿದ್ದು ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೂವರು ಒಂದೇ ಕುಟುಂಬದವರಾಗಿದ್ದು, ಚೀನಾ ಪ್ರವಾಸ ಮುಗಿಸಿ ಉಡುಪಿಗೆ ಮರಳಿದ್ದರು. ಬಳಿಕ ಅವರಲ್ಲಿ ಗಂಟಲು ಸೋಂಕು ಹಾಗೂ ಶೀತದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಚೀನಾದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ಕಫದ ಮಾದರಿ ಹಾಗೂ ರಕ್ತವನ್ನು ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿಲ್ಲ. ಆದರೂ, ಅಗತ್ಯ ಎಚ್ಚರಿಕೆ ವಹಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವೈದ್ಯರ ಸ್ಪಷ್ಟನೆ:ಮತ್ತೊಂದೆಡೆ, ಮಣಿಪಾಲದ ಕೆಎಂಸಿಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸುದ್ದಿ ಸುಳ್ಳು. ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿರುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಆಸ್ಪತ್ರೆಯ ಸಿಬ್ಬಂದಿ ಖಚಿತ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT