ಮಂಗಳವಾರ, ಜೂಲೈ 7, 2020
29 °C

ಬೆಂಗಳೂರು: ಕೊರೊನಾ ಸೋಂಕಿತ ಎಎಸ್ಐ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ನಗರದ ಠಾಣೆಯೊಂದರ ಎಎಸ್ಐಯೊಬ್ಬರು ಶನಿವಾರ ಮೃತಪಟ್ಟಿದ್ದು, ಅವರಿಗೆ ಕೊರೊನಾ ಸೋಂಕು ತಗುಲಿದ್ದು ಪರೀಕ್ಷೆಯಿಂದ ದೃಢಪಟ್ಟಿದೆ.

57 ವರ್ಷದ ಎಎಸ್ಐ, ವೈಟ್‌ಪೀಲ್ಡ್ ವಿಭಾಗದ ವ್ಯಾಪ್ತಿಯ ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳ‌ ಜೊತೆ ವಾಸವಿದ್ದರು.

ಶನಿವಾರ ರಾತ್ರಿ ಅವರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು. ಕುಟುಂಬಸ್ಥರೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

ಮೃತದೇಹದ ಗಂಟಲಿನ ದ್ರವವನ್ನು ಸಂಗ್ರಹಿಸಿದ ವೈದ್ಯರು, ಪರೀಕ್ಷೆಗೆ ಕಳುಹಿಸಿದ್ದರು. ಅದರ ವರದಿ ಪಾಸಿಟಿವ್  ಬಂದಿದೆ ಎಂಬುದಾಗಿ ವೈಟ್‌ಪೀಲ್ಡ್ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು