ಚಿಕ್ಕಮಗಳೂರು: ದುಬೈನಿಂದ ಬಂದಿದ್ದ ಮಹಿಳೆಗೆ ಜ್ವರ, ಶೀತ, ಕೆಮ್ಮು ಕಾಣಿಸಿಕೊಂಡಿದ್ದು ಕೊರೊನಾ ವೈರಾಣು ಸೋಂಕು ಶಂಕೆ ಮೇರೆಗೆ ಮಂಗಳವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
‘ಮಹಿಳೆಯ ಗಂಟಲಿನ ದ್ರವ, ರಕ್ತದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ‘ಪ್ರಜಾವಾಣಿ’ಗೆ ತಿಳಿಸಿದರು.
ಈ ಮಹಿಳೆ ತರೀಕೆರೆ ತಾಲ್ಲೂಕಿನ ಗ್ರಾಮವೊಂದಕ್ಕೆ ದುಬೈನಿಂದ ಬಂದಿದ್ದರು. ಜಿಲ್ಲೆಯಲ್ಲಿ ಕೊರೊನಾ ವೈರಾಣು ಸೋಂಕು ಶಂಕೆಯ ಮೂರನೇ ಪ್ರಕರಣ ಇದು. ಎರಡು ಪ್ರಕರಣಗಳಲ್ಲಿ ಸೋಂಕು ದೃಢಪಟ್ಟಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.