ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 33ಕ್ಕೆ ಏರಿಕೆ

Last Updated 23 ಮಾರ್ಚ್ 2020, 15:09 IST
ಅಕ್ಷರ ಗಾತ್ರ

ಬೆಂಗಳೂರು:ಪ್ರಪಂಚದ ನಿದ್ದೆಗೆಡಿಸಿರುವ ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿಯೂ ವ್ಯಾಪಿಸುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಈವರೆಗೂ 33 ಪ್ರಕರಣಗಳು ಪತ್ತೆಯಾಗಿವೆ ಎಂದು ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಂದು ಮರಣ ಪ್ರಕರಣ ವರದಿಯಾಗಿದೆ. ಹೊಸದಾಗಿ ಏಳು ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆಯು 33ಕ್ಕೆ ಏರಿಕೆಯಾಗಿದೆ.ದುಬೈನಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಕೇರಳ ಮೂಲದ 46 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್-19 ದೃಢಪಟ್ಟಿದೆ. ದುಬೈನಿಂದ ವಾಪಸ್ಸಾಗಿದ್ದ 38 ವರ್ಷದ ವ್ಯಕ್ತಿಯಲ್ಲೂ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದ್ದು, ಬೆಂಗಳೂರಿನಲ್ಲೇ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ನಿಗಾ ವಹಿಸಲಾಗುತ್ತಿದೆ ಎಂದು ಸರ್ಕಾರ ಹೊರಡಿಸಿರುವ ಹೇಳಿಕೆ ತಿಳಿಸಿದೆ.

ಕೋವಿಡ್-19 ಪೀಡಿತ 31 ಮಂದಿ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿಕೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಒಟ್ಟು 23 ಪ್ರಕರಣಗಳು ಪತ್ತೆಯಾಗಿದೆ. ಸೋಂಕು ತಗುಲಿದ್ದಒಬ್ಬರುಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಲಬುರ್ಗಿಯಲ್ಲಿ 3, ಕೊಡಗಿನಲ್ಲಿ 1, ಚಿಕ್ಕಬಳ್ಳಾಪುರದಲ್ಲಿ 2, ಮೈಸೂರಿನಲ್ಲಿ 2, ಧಾರವಾಡದಲ್ಲಿ 1 ಮತ್ತು ದಕ್ಷಿಣ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ.ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ33ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಇದುವರೆಗೂ 1,27,902 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. ಅಲ್ಲದೆ ಮಂಗಳೂರು ಮತ್ತು ಕಾರವಾರ ಕಡಲ ಬಂದರುಗಳಲ್ಲಿಯೂ ಕೂಡ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT