ಭಾನುವಾರ, ಜುಲೈ 25, 2021
21 °C

Covid-19 Karnataka Update | ಸೋಂಕಿತರ ಸಂಖ್ಯೆ ಇಳಿಮುಖ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಗುಣಮುಖರ ಸಂಖ್ಯೆ ಹೆಚ್ಚಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 120 ಹೊಸ ಪ್ರಕರಣಗಳು ವರದಿಯಾಗಿವೆ. 257 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6 ಸಾವಿರ ದಾಟಿದೆ.

ಒಂದು ದಿನದ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಮೂವರು ಮೃತಪಟ್ಟಿದ್ದಾರೆ. ಸೋಂಕಿನಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 69ಕ್ಕೆ ಮುಟ್ಟಿದೆ.

ಜೂನ್ 9ರ ಸಂಜೆ 5ರಿಂದ ಜೂನ್ 10ರ ಸಂಜೆ 5ರ ಅವಧಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ವರದಿಯಾದ ಸೋಂಕು ಪ್ರಕರಣಗಳ ವಿವರ ಇಂತಿದೆ...

ಬೆಂಗಳೂರು ನಗರ 42, ಯಾದಗಿರಿ 27, ವಿಜಯಪುರ 13, ಕಲಬುರ್ಗಿ 11, ಬೀದರ್ 5, ದಕ್ಷಿಣ ಕನ್ನಡ ಮತ್ತು ಧಾರವಾಡ ತಲಾ 4, ದಾವಣಗೆರೆ, ಹುಬ್ಬಳ್ಳಿ ಮತ್ತು ಬಳ್ಳಾರಿ ತಲಾ 3, ಬಾಗಲಕೋಟೆ ಮತ್ತು ರಾಮನಗರ ತಲಾ 2, ಬೆಳಗಾವಿ 1.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು