ಸೋಮವಾರ, ಸೆಪ್ಟೆಂಬರ್ 20, 2021
23 °C

Covid-19 Karnataka Update | ಒಂದೇ ದಿನ 1498 ಪ್ರಕರಣ, ಬೆಂಗಳೂರಿನಲ್ಲಿ 800

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Covid19

ಬೆಂಗಳೂರು: ಸೋಮವಾರ ಸಂಜೆ 5 ಗಂಟೆ ಬಳಿಕ ಮಂಗಳವಾರ ಸಂಜೆ 5 ಗಂಟೆ ನಡುವಣ ಅವಧಿಯಲ್ಲಿ ರಾಜ್ಯದಾದ್ಯಂತ 1,498 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 800 ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲೀಗ ಸೋಂಕಿತರ ಸಂಖ್ಯೆ 26,815ಕ್ಕೆ ತಲುಪಿದೆ. ಸೋಂಕಿನಿಂದ ಬಳಲುತ್ತಿದ್ದವರಲ್ಲಿ ಮಂಗಳವಾರ 15 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೂ ಇಂದು ಹೆಚ್ಚಿದ್ದು 571 ಜನ ಬಿಡುಗಡೆಗೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 15,297 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಕೋವಿಡ್‌ನಿಂದಾಗಿ ರಾಜ್ಯದಲ್ಲಿ 416 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದ 29 ಜಿಲ್ಲೆಗಳಲ್ಲಿ ಮಂಗಳವಾರ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಪ್ರಕರಣಗಳು (800) ದೃಢಪಟ್ಟಿವೆ.

ಹೊಸ ಪ್ರಕರಣಗಳ ಜಿಲ್ಲಾವರು ಮಾಹಿತಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು