ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | ಒಂದೇ ದಿನ 1694 ಪ್ರಕರಣ, ಬೆಂಗಳೂರಿನಲ್ಲಿ 994

ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನಲ್ಲಿ 994 ಸೇರಿದಂತೆ ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 1,694 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 20 ಸಾವಿರದ ಗಡಿಯತ್ತ (19,710) ಸಾಗಿದೆ.

ಸೋಂಕಿನಿಂದ ಬಳಲುತ್ತಿದ್ದವರಲ್ಲಿ ಮತ್ತೆ 21 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 5, ಚಿಕ್ಕಬಳ್ಳಾಪುರ ಹಾಗೂ ಕಲಬುರ್ಗಿಯಲ್ಲಿ ತಲಾ 3, ಶಿವಮೊಗ್ಗ ಹಾಗೂ ವಿಜಯಪುರದಲ್ಲಿ ತಲಾ ಇಬ್ಬರು ಹಾಗೂ ಬಳ್ಳಾರಿ, ಹಾಸನ, ದಾವಣಗೆರೆ, ಬೀದರ್, ರಾಯಚೂರು, ಬೆಂಗಳೂರು ಗ್ರಾಮಾಂತರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದಾಗಿ ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 293ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 197 ಸೇರಿದಂತೆ 471 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಶುಕ್ರವಾರ ಒಂದೇ ದಿನ 18,307 ಮಂದಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಈವರೆಗೆ ಒಂದು ದಿನ ಪರೀಕ್ಷೆ ಮಾಡಿದ ಗರಿಷ್ಠ ಮಾದರಿಗಳು ಇವಾಗಿವೆ. ಇದರಿಂದಾಗಿ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ (10,608) ದಾಟಿದೆ. ರಾಜ್ಯದ 29 ಜಿಲ್ಲೆಗಳಲ್ಲಿಯೂ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ (994) ಹಾಗೂ ಹಾವೇರಿಯಲ್ಲಿ ಕನಿಷ್ಠ (1) ಪ್ರಕರಣ ದೃಢಪಟ್ಟಿವೆ.

ಕಳ್ಳತನ ಆರೋಪದಡಿ ಬಂಧಿಸಲಾಗಿದ್ದ ವ್ಯಕ್ತಿಯೊಬ್ಬರಿಗೆ ಕೋವಿಡ್‌ ದೃಢಪಟ್ಟಿತ್ತು. ಈ ವ್ಯಕ್ತಿ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಸಂಜೆ ಗದಗಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಆನಂದರಾವ್‌ ವೃತ್ತದಲ್ಲಿರುವ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಾಹನ ಚಾಲಕರೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ಬೆಳಗಾವಿಯ ಅಥಣಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಮುನ್ನೆಚ್ಚರಿಕೆ ಇಲ್ಲದೇ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಬೆಂಗಳೂರಿನ ಹನುಮಂತ ನಗರದಲ್ಲಿ ಸಕಾಲದಲ್ಲಿ ಆಂಬುಲೆನ್ಸ್‌ ಹಾಗೂ ಸೂಕ್ತ
ಚಿಕಿತ್ಸೆ ಸಿಗದೆ 65 ವರ್ಷದ ವ್ಯಕ್ತಿ ರಸ್ತೆಯಲ್ಲಿಯೇ ಮೃತಪಟ್ಟಿದ್ದಾರೆ. ಕೆಲವು ರೋಗಿಗಳು ಖಾಸಗಿ ಆಸ್ಪತ್ರೆಗಳಿಗೆ ಅಲೆ
ದಾಡಿ, ಹಾಸಿಗೆ ಸಿಗದೆ ಆಸ್ಪತ್ರೆಯ ಆವರಣದಲ್ಲಿಯೇ ಗಂಟೆಗಟ್ಟಲೆ ಕಾದರು.

ಬೆಂಗಳೂರಿನಲ್ಲಿ ಸಾವಿರ ಸನಿಹ ಸೋಂಕಿತರ ಸಂಖ್ಯೆ: ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇದಿನೇ ಗಣನೀಯವಾಗಿ ಹೆಚ್ಚುತ್ತಿದೆ. ಒಂದೇ ದಿನ 994 ಹೊಸ ಪ್ರಕರಣಗಳು ಪತ್ತೆಯಾಗಿದೆ. ನಗರದ ಸೋಂಕಿತರ ಸಂಖ್ಯೆ 7173ಕ್ಕೆ ತಲುಪಿದೆ. ಈ ಪೈಕಿ 105 ಸಾವು ಸಂಭವಿಸಿದ್ದು, 770 ಮಂದಿ ಗುಣಮುಖರಾಗಿದ್ದಾರೆ. ಸದ್ಯ 6297 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT