ಮಂಗಳವಾರ, ಆಗಸ್ಟ್ 4, 2020
26 °C

Covid-19 Karnataka Update | ಒಂದೇ ದಿನ 1,839 ಪ್ರಕರಣ, 42 ಸೋಂಕಿತರು ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶುಕ್ರವಾರ ಸಂಜೆ 5 ರಿಂದ ಶನಿವಾರ ಸಂಜೆ 5 ರವರೆಗೆ ಬೆಂಗಳೂರಿನಲ್ಲಿ 1,172 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1,839 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 42 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ. ಇದರಲ್ಲಿ 9,244 ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 11,966 ಪ್ರಕರಣಗಳು ಸಕ್ರಿಯವಾಗಿವೆ. ಉಳಿದಂತೆ 335 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 8,345 ಸಕ್ರಿಯ ಪ್ರಕರಣ
ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇದಿನೇ ಗಣನೀಯವಾಗಿ ಹೆಚ್ಚುತ್ತಿದೆ. ಒಂದೇ ದಿನ ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,345ಕ್ಕೆ ತಲುಪಿದೆ. ಈ ಪೈಕಿ 129 ಮಂದಿ ಮೃತಪಟ್ಟಿದ್ದಾರೆ. 965 ಸೋಂಕಿತರು ಗುಣಮುಖರಾಗಿದ್ದು, ಇನ್ನೂ 7,250 ಸಕ್ರಿಯ ಪ್ರಕರಣಗಳಿವೆ.

ದಕ್ಷಿಣ ಕನ್ನಡದಲ್ಲಿ 1,087; ಬಳ್ಳಾರಿಯಲ್ಲಿ 1,154
ದಕ್ಷಿಣ ಕನ್ನಡ ಹಾಗೂ ಬಳ್ಳಾರಿಯಲ್ಲಿ ಇಂದು ಕ್ರಮವಾಗಿ 75 ಮತ್ತು73 ಪ್ರಕರಣಗಳು ವರದಿಯಾಗಿವೆ. ಈ ಎರಡೂ ಜಿಲ್ಲೆಗಳಲ್ಲಿ ಕ್ರಮವಾಗಿ 552 ಮತ್ತು 605 ಪ್ರಕರಣಗಳು ಸಕ್ರಿಯವಾಗಿವೆ.

ಶಿವಮೊಗ್ಗ: ಒಂದೇ ದಿನ 31 ಜನರಿಗೆ ಸೋಂಕು
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 31 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 

ಶಿವಮೊಗ್ಗ ನಗರ 13, ಶಿವಮೊಗ್ಗ ಗ್ರಾಮಾಂತರದಲ್ಲಿ 1 ಪ್ರಕರಣ ಪತ್ತೆಯಾಗಿದೆ. ಸೊರಬ ತಾಲ್ಲೂಕಿನಲ್ಲಿ 12, ಹೊಸನಗರ 2, ಶಿಕಾರಿಪುರ, ಸಾಗರ, ತೀರ್ಥಹಳ್ಳಿಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ. ಗ್ರಾಮೀಣ ಪ್ರದೇಶಗಳಲ್ಲೂ ವೈರಸ್‌ ಹರಡುತ್ತಿದ್ದು, ಸಮುದಾಯಕ್ಕೆ ಪಸರಿಸುವ ಆತಂಕ ಮೂಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು