ಸಚಿವ ಸಿ.ಟಿ.ರವಿಗೆ ಕೊರೊನಾ ಸೋಂಕು

ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು ತಮಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ ಎಂದು ತಿಳಿಸಿದ್ದಾರೆ.
ಸೂಕ್ತ ಚಿಕಿತ್ಸೆ ಪಡೆಯುತ್ತಾ ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದು ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ
'ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ' ಎಂದಿದ್ದಾರೆ
ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ.
— C T Ravi 🇮🇳 ಸಿ ಟಿ ರವಿ (@CTRavi_BJP) July 13, 2020
ಇದೇ ವೇಳೆ, ತಮ್ಮ ಪತ್ನಿ ಪಲ್ಲವಿ, ಸಿಬ್ಬಂದಿ ವರ್ಗ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದು, ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿಲ್ಲವೆಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.