ಗುರುವಾರ , ಜೂಲೈ 9, 2020
24 °C

Covid-19 Karnataka Update: ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆ, 2 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇ 1ರ ಸಂಜೆ 5ರಿಂದ ಮೇ 2ರ ಮಧ್ಯಾಹ್ನ 12ಗಂಟೆವರೆಗೂ ರಾಜ್ಯದಲ್ಲಿ 11 ಕೋವಿಡ್‌–19 ದೃಢಪಟ್ಟ ಪ್ರಕರಣಗಳು ವರದಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 598ಕ್ಕೆ ಏರಿಕೆಯಾಗಿದ್ದು, ಒಟ್ಟು ಸೋಂಕು ಪ್ರಕರಣಗಳ ಪೈಕಿ 25 ಮಂದಿ ಸಾವಿಗೀಡಾಗಿದ್ದು 255 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೀದರ್‌ನಲ್ಲಿ 82 ವರ್ಷದ ಪುರುಷ, ದಾವಣಗೆರೆಯಲ್ಲಿ 69 ವರ್ಷದ ಪುರುಷ ಮೃತಪಟ್ಟಿದ್ದಾರೆ.

ಬೆಳಗಾವಿ, ಬೀದರ್‌,ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಂಗಳೂರಿನಲ್ಲಿ ತಲಾ ಒಂದು ಪ್ರಕರಣ ಹಾಗೂ ತುವಕೂರು, ವಿಜಯಪುರದಲ್ಲಿ ತಲಾ ಎರಡು ಹೊಸ ಪ್ರಕರಣಗಳು ಪತ್ತೆಯಾಗಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು