ಶುಕ್ರವಾರ, ಜುಲೈ 30, 2021
23 °C

Covid-19 Karnataka Update | ಒಂದೇ ದಿನ 2062 ಕೋವಿಡ್ ಪ್ರಕರಣ, 54 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆ ವರೆಗಿನ ಅವಧಿಯಲ್ಲಿ ರಾಜ್ಯದಾದ್ಯಂತ 2,062 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 54 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. 

ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28, 877ಕ್ಕೆ ಏರಿಕೆಯಾಗಿದೆ. ಇದುವರೆಗೆ 470 ಮಂದಿ ಸಾವಿಗೀಡಾಗಿದ್ದಾರೆ. 

ಇದುವರೆಗೆ 11876 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ 16, 527 ಸಕ್ರಿಯ ಪ್ರಕರಣಗಳು ಇವೆ. 

ಬೆಂಗಳೂರಿನಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು (1148) ಪ್ರಕರಣಗಳು ಪತ್ತೆಯಾಗಿವೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು