ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 ಕರ್ನಾಟಕ Updates: ರಾಜ್ಯದಲ್ಲಿ 463; ಬೆಂಗಳೂರಿನಲ್ಲಿ 11 ಹೊಸ ಪ್ರಕರಣ

Last Updated 24 ಏಪ್ರಿಲ್ 2020, 7:18 IST
ಅಕ್ಷರ ಗಾತ್ರ

ಬೆಂಗಳೂರು: ಏಪ್ರಿಲ್‌ 23ರ ಸಂಜೆ 5ರಿಂದ ಏಪ್ರಿಲ್‌ 24ರ ಮಧ್ಯಾಹ್ನ 12ರ ವರೆಗೂ ರಾಜ್ಯದಲ್ಲಿ ಕೋವಿಡ್‌–19 ದೃಢಪಟ್ಟ18 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೊನಾ ವೈರಸ್‌ ಸೋಂಕು ಪ್ರಕರಣಗಳು 463 ತಲುಪಿದ್ದು, ಸೋಂಕಿನಿಂದ 18 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಪ್ರಕರಣಗಳ ಪೈಕಿ 150 ಜನ ಗುಣಮುಖರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಒಟ್ಟು 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇವುಗಳ ಪೈಕಿ ಉಸಿರಾಟ ಸಮಸ್ಯೆ ಇರುವ ಒಬ್ಬರಿಗೆ ಕೊರೊನಾ ಪತ್ತೆಯಾಗಿದ್ದು ಹೊಂಗಸಂದ್ರದಲ್ಲಿ 5, ಪಾದರಾಯನಪುರದ 5 ಜನರಿಗೆ ಸೋಂಕು ಪತ್ತೆಯಾಗಿದೆ.

ಉಳಿದಂತೆ ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿಯಲ್ಲಿ ತಲಾ ಒಬ್ಬರಿಗೆ, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ತಲಾ ಇಬ್ಬರಿಗೆ ಸೋಂಕು ಇರುವುದ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT