ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ನಿರ್ಲಕ್ಷ್ಯದಿಂದಲೇ ಮಂಡ್ಯಕ್ಕೆ ಸೋಂಕು: ಕುಮಾರಸ್ವಾಮಿ

Last Updated 1 ಮೇ 2020, 8:45 IST
ಅಕ್ಷರ ಗಾತ್ರ

ಬೆಂಗಳೂರು:ಸರ್ಕಾರವೇ ಈ ಹಿಂದೆ ರಾಮನಗರಕ್ಕೆ ಕೊರೊನಾತಂದಿಟ್ಟಿತ್ತು,ಈಗ ಮಂಡ್ಯಕ್ಕೂತಂದಿದ್ದು ಇದರ ಹಿಂದೆರಾಜಕೀಯ ಶಂಕೆ ಇದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಮುಂಬೈನಿಂದಸೋಂಕನ್ನು ತರುವ ಮೂಲಕ ಗ್ರೀನ್‌ಜೋನ್‌ನಲ್ಲಿದ್ದ ಜಿಲ್ಲೆಗೆ ಸರ್ಕಾರವೇ ಸೋಂಕುಹರಡುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಮಂಡ್ಯಕ್ಕೆ ತಂದಿದ್ದ ಮೃತವ್ಯಕ್ತಿಯ ಜೊತೆ ಬಂದವರಲ್ಲಿ5 ಮಂದಿಗೆ ಪಾಸಿಟಿವ್ ಇತ್ತು.ಮಂಡ್ಯ ಜಿಲ್ಲೆಗೆ ಮುಂಬೈನಿಂದ ಸುಮಾರು 7 ರಿಂದ 8 ಸಾವಿರ ಮಂದಿ ಬಂದಿದ್ದಾರೆ. ಅವರನ್ನು ಸರಿಯಾದ ರೀತಿಯಲ್ಲಿ ಕ್ವಾರಂಟೈನ್ ಮಾಡಿಲ್ಲ. ಇಲ್ಲಿನಜನರು ಸಂಕಷ್ಟಕ್ಕೆ ಸಿಲುಕುವ ದಿನಗಳು ಬರಲಿವೆ ಎಂದರು.

ಮಂಡ್ಯ ಜಿಲ್ಲೆಯನಕಲಿ ದಾಖಲೆ ಸೃಷ್ಟಿ ಮಾಡಿ ಮೃತದೇಹ ತಂದಿದ್ದಾರೆ ಎಂದು ಕುಮಾರಸ್ವಾಮಿಶುಕ್ರವಾರ ದೇವನಹಳ್ಳಿ ಪಟ್ಟಣದಲ್ಲಿ ಹೇಳಿದರು.

ಮೃತರು ಕೊರೊನಾದಿಂದ ಸತ್ತಿದ್ದಾರೋ ಇಲ್ಲವೋ ಎಂಬುದು ತಿಳಿದಿಲ್ಲ. ಆದರೆ ನಕಲಿ ದಾಖಲೆ ಸೃಷ್ಟಿಸಿ ಮೃತದೇಹ ತಂದಿದ್ದಾರೆ. ಸರ್ಕಾರ ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT