ಗುರುವಾರ , ಏಪ್ರಿಲ್ 2, 2020
19 °C
ವೆನ್ಲಾಕ್ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ತುರ್ತು ಭೇಟಿ

ಕೊರೊನಾ | ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 200 ಹಾಸಿಗೆಯ ಪ್ರತ್ಯೇಕ ವಾರ್ಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳವಾರ ಇಲ್ಲಿನ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು.

ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆ ವೆನ್ಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ ಸೋಮವಾರ ನಡೆದಿತ್ತು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿವೇಶನದ ನಿಮಿತ್ತ ದೆಹಲಿಯಲ್ಲಿ ಇದ್ದರು.  ಜನರು ವೆನಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿಲ್ಲ ಎನ್ನುವ ಊಹಾಪೋಹದ ಬಗ್ಗೆ ಪರಿಶೀಲಿಸಲು ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು. 

ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು. 

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ಗಮನಕ್ಕೆ ತಂದರು.

ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು