ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗಿಲ್ಲ: ಸಂಸದ ಭಗವಂತ ಖೂಬಾ

Last Updated 12 ಜೂನ್ 2020, 11:55 IST
ಅಕ್ಷರ ಗಾತ್ರ

ಬಸವಕಲ್ಯಾಣ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಾಳಜಿಯಿಂದಾಗಿ ಕೊರೊನಾದಿಂದ ದೇಶದಲ್ಲಿ ಹೆಚ್ಚು ಸಾವು ಸಂಭವಿಸಿಲ್ಲ’ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ಇಲ್ಲಿ ಶುಕ್ರವಾರ ಅಯೋಜಿಸಿದ್ದ ಬಿಜೆಪಿ ತಾಲ್ಲೂಕು ಕಾರ್ಯಕರ್ತರ ಸಭೆ ಹಾಗೂ ಕೇಂದ್ರದ ಮೋದಿ ಸರ್ಕಾರದ ಸಾಧನೆಯ ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸ್ವಾವಲಂಬಿ ಭಾರತಕ್ಕಾಗಿ ಹಾಗೂ ಸ್ಥಳೀಯ ಉತ್ಪನ್ನಗಳ ಉತ್ಪಾದನೆ ಹೆಚ್ಚಳಕ್ಕಾಗಿ ಮೋದಿಯವರು ಈಚೆಗೆ ₹20 ಲಕ್ಷ ಕೋಟಿ ಪ್ಯಾಕೇಜ್‌ ಘೋಷಿಸಿದ್ದಾರೆ. ಇವರ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, 200 ಕಿ.ಮೀ ಸಿಆರ್‌ಪಪಿಎಫ್ ರಸ್ತೆ, 250 ಕಿ.ಮೀ ಪ್ರಧಾನಮಂತ್ರಿ ಸಡಕ್ ಯೋಜನೆ ಕಾಮಗಾರಿ ನಡೆದಿದೆ’ ಎಂದರು.

ವಿಧಾನಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ನಗರ ಘಟಕದ ಅಧ್ಯಕ್ಷ ಕೃಷ್ಣಾ ಗೋಣೆ, ಜಿ.ಪಂ ಸದಸ್ಯ ಗುಂಡುರೆಡ್ಡಿ, ದೀಪಕ ಗಾಯಕವಾಡ, ಅನಿಲ ಭೂಸಾರೆ, ರವಿ ಚಂದನಕೆರೆ, ಶರಣು ಸಲಗರ, ದೀಪಕ ಗುಡ್ಡಾ, ವಿಜಯಕುಮಾರ ಮಂಠಾಳೆ, ಶೋಭಾ ತೆಲಂಗ್ ಹಾಗೂ ಹಣಮಂತ ಧನಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT