ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಹೋರಾಟದಲ್ಲಿ ರಾಜಕಾರಣ ಬೇಡ: ಸಚಿವ ಡಾ.ಕೆ.ಸುಧಾಕರ

ಅಕ್ಷರ ಗಾತ್ರ

ಬೆಂಗಳೂರು: 'ಕೊರೊನಾ ವಿರುದ್ಧದ ಹೋರಾಟದಲ್ಲಿ ಕ್ಷುಲ್ಲಕ ರಾಜಕಾರಣ ಬೇಡ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಟ್ವೀಟ್ ಮಾಡಿದ್ದಾರೆ.

'ಕಾಂಗ್ರೆಸ್ ಕಾರ್ಯಕರ್ತನೊಬ್ಬ ವಲಸೆ ಕಾರ್ಮಿಕನಂತೆ ಮಾತನಾಡಿದ್ದಾನೆ' ಎಂಬ ಆಕ್ಷೇಪವಿರುವ ಮೀಮ್ ಶೇರ್ ಮಾಡಿರುವ ಸುಧಾಕರ, 'ಇಂಥ ದುಷ್ಕೃತ್ಯವನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ' ಎಂದು ಹೇಳಿದ್ದಾರೆ.

'ಇಡೀ ಸಮಾಜ ಒಗ್ಗಟ್ಟಿನಿಂದ ಇರಬೇಕಾದ ಈ ಸಂದರ್ಭದಲ್ಲಿ ಒಡಕು ಮೂಡಿಸಲು ಪ್ರಯತ್ನಿಸುವ, ಹಗಲಿರುಳು ದುಡಿಯುತ್ತಿರುವ ಸರ್ಕಾರ ಮತ್ತು ಕೊರೊನಾ ಯೋಧರಿಗೆ ಮಸಿ ಬಳಿಯುವುದು ತಪ್ಪು' ಎಂದು ಅಭಿಪ್ರಾಯಪಟ್ಟಿದ್ದಾರೆ.

ಜ್ವರ ಬಂದರೆ ತಪಾಸಣೆ ಮಾಡಿಸಿಕೊಳ್ಳಿ

'ಮಳೆಗಾಲ ಆರಂಭವಾಗಿರುವುದರಿಂದ ಶೀತ, ಜ್ವರ, ನೆಗಡಿ ಮತ್ತು ಕೆಮ್ಮು ಸಾಮಾನ್ಯ. ಇಂಥ ಲಕ್ಷಣಗಳು ಕಂಡು ಬಂದರೆ ತಕ್ಷಣ ಸಮೀಪದ ಫೀವರ್ ಕ್ಲಿನಿಕ್‌ಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ' ಎಂದು ಸಚಿವ ಡಾ.ಕೆ.ಸುಧಾಕರ ಜನರಿಗೆ ಕಿವಿಮಾತು ಹೇಳಿದ್ದಾರೆ.

'ಕೊರೊನಾ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ. ಪ್ರಾಥಮಿಕ ಹಂತದಲ್ಲೇ ಎಚ್ಚರ ವಹಿಸಿದರೆ ಚಿಕಿತ್ಸೆ ಸುಲಭ' ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT