ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ತಡೆಗೆ ಕ್ರಮ: ಅಂತರರಾಜ್ಯ ಬಸ್ ಸೇವೆ ಮಾರ್ಚ್‌ 31ರ ವರೆಗೆ ಸ್ಥಗಿತ

Last Updated 22 ಮಾರ್ಚ್ 2020, 9:42 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಯಾಣಿಕ ರೈಲು ಸೇವೆ ಸ್ಥಗಿತ ಆದೇಶ ಹೊರಬಿದ್ದ ಬೆನ್ನಲ್ಲೇ ಎಲ್ಲ ಅಂತರರಾಜ್ಯ ಬಸ್ ಸೇವೆಯನ್ನು ರಾಜ್ಯ ಸರ್ಕಾರ ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸಿದೆ.

ಕೊರೊನಾ ವೈರಸ್‌ ಸೋಂಕು (ಕೋವಿಡ್–19) ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ವೇಗದೂತ ಹಾಗೂ ರಾಜಹಂಸ ಬಸ್ಸುಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಇಲ್ಲದೆ (unreserved passengers) ಪ್ರಯಾಣಿಸುವವರ ಹೆಸರು ಮತ್ತು ದೂರವಾಣಿ ಸಂಖ್ಯೆಯನ್ನು ಪಡೆಯುವ ವ್ಯವಸ್ಥೆಯನ್ನು (COVID-19 ಸೋಂಕಿತ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸಿದ ಸಮಯದಲ್ಲಿ ಇತರೆ ಪ್ರಯಾಣಿಕರ ಮಾಹಿತಿ ದೊರೆಯದಂತಾಗುವ ಕಾರಣದಿಂದ) ಈಗಿನಿಂದಲೇ ಮುಂದಿನ‌ ಆದೇಶದವರೆಗೆ ಪ್ರಾರಂಭಿಸಲಾಗಿದೆ ಎಂದು ನಿಗಮ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT