ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್‌| ಕೆಲವರಿಗೆ ಕ್ವಾರಂಟೈನ್‌ನಿಂದ ವಿನಾಯತಿ

Last Updated 13 ಮೇ 2020, 20:59 IST
ಅಕ್ಷರ ಗಾತ್ರ

ಬೆಂಗಳೂರು: ಗರ್ಭಿಣಿಯರು ಸೇರದಂತೆ ಕೆಲವೊಂದು ವರ್ಗದ ವಿದೇಶಿ ಪ್ರಯಾಣಿಕರಲ್ಲಿ ಕೋವಿಡ್ ತಪಾಸಣೆ ವೇಳೆ ಸೋಂಕಿನ ಲಕ್ಷಣಗಳು ಕಾಣಿಸದಿದ್ದಲ್ಲಿ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಗಾಗಲು ಆರೋಗ್ಯ ಇಲಾಖೆ ಅನುಮತಿ ನೀಡಿದೆ.

ಈ ಸಂಬಂಧ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಸದ್ಯ ಕೊರೊನಾ ಸೋಂಕು ಶಂಕಿತರು, ರೋಗಿಗಳೊಂದಿಗೆ ನೇರ ಹಾಗೂ ಪರೋಕ್ಷ ಸಂಪರ್ಕ ಹೊಂದಿರುವವರು, ಅನ್ಯ ರಾಜ್ಯಗಳು ಮತ್ತು ವಿದೇಶಗಳಿಂದ ಬಂದವರನ್ನು ಹೋಟೆಲ್, ವಸತಿಗೃಹಗಳಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಅನುಸಾರ ವಿದೇಶದಿಂದ ಬಂದವರಲ್ಲಿ ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು, 80 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕ್ವಾರಂಟೈನ್‌ನಲ್ಲಿ ವಿನಾಯತಿ ನೀಡಲಾಗಿದ್ದು, ಅವರಲ್ಲಿ ಸೋಂಕಿನ ಲಕ್ಷಣಗಳು ಇಲ್ಲದಿದ್ದಲ್ಲಿ ಮನೆಯಲ್ಲಿಯೇ 14 ದಿನಗಳು ಕ್ವಾರಂಟೈನ್‌ಗೆ ಒಳಗಾಗಲು ಆರೋಗ್ಯ ಇಲಾಖೆ ಅವಕಾಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT