ಬೆಂಗಳೂರು: ಏಪ್ರಿಲ್ 20ರ ಸಂಜೆ 5ರಿಂದ ಏಪ್ರಿಲ್ 21ರ ಸಂಜೆ 5ರವರೆಗೂ ರಾಜ್ಯದಲ್ಲಿ ಕೋವಿಡ್–19 ದೃಢಪಟ್ಟ 10 ಹೊಸ ಪ್ರಕರಣಗಳು ದಾಖಲಾಗಿವೆ.

ವಿಜಯಪುರ, ಕಲಬುರ್ಗಿಯಲ್ಲಿ ತಲಾ 3, ನಂಜನಗೂಡಿನಲ್ಲಿ 2, ದಕ್ಷಿಣ ಕನ್ನಡ ಹಾಗೂ ಬೆಳಗಾವಿಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಈವರೆಗೂ ಒಟ್ಟು 418 ಕೊರೊನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 280 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 129 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲಬುರ್ಗಿಯ ಮೂವರಲ್ಲಿ ಇಬ್ಬರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು,ಒಬ್ಬರಮಾಹಿತಿ ಲಭ್ಯವಾಗಿಲ್ಲ. ವಿಜಯಪುರದ ಮೂವರು ರೋಗಿ–306ರ ಸಂಪರ್ಕಕ್ಕೆ ಬಂದವರಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಪತ್ತೆಯಾಗಿರುವ ಸೋಂಕಿತರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ನಂಜನಗೂಡಿನ ಎರಡು ಪ್ರಕರಣಗಳು ಸೋಂಕಿತರ ದ್ವೀತಿಯ ಸಂಪರ್ಕದಿಂದ ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಸಂಜೆಯಹೆಲ್ತ್ ಬುಲೆಟಿನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.