ಭಾನುವಾರ, ಜುಲೈ 25, 2021
22 °C
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ; ಸಚಿವ ಮಾಧುಸ್ವಾಮಿ ಸೂಚನೆ

ಚಿಕ್ಕನಾಯಕನಹಳ್ಳಿ: ಮೇಕೆಗಳಿಗೂ ಕೊರೊನಾ ಪರೀಕ್ಷೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರ 43 ಮೇಕೆಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಈ ಮೇಕೆಗಳಿಗೂ ಕೊರೊನಾ ಪರೀಕ್ಷೆ ಮಾಡಿಸುವಂತೆ ಚಿಕ್ಕನಾಯಕನಹಳ್ಳಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೋಮವಾರ ಜಿಲ್ಲಾಡಳಿತ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಗೊಲ್ಲರಹಟ್ಟಿಯ ವ್ಯಕ್ತಿಯನ್ನು ಅವರ ಸ್ನೇಹಿತರೊಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಜೂನ್ 23ರಂದು ಆ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆ ಆಗಿತ್ತು. ಈ ನಡುವೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸ್ನೇಹಿತನ ಮನೆಯಲ್ಲಿ ಐದು ಮೇಕೆಗಳು ಏಕಾಏಕಿ ಮೃತಪಟ್ಟಿವೆ. ಅವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಆರೋಗ್ಯವಾಗಿದ್ದ ಮೇಕೆಗಳ ಸಾವು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.

ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ಮರುದಿನವೇ ಅವರ ಸಂಬಂಧಿಕರು 43 ಮೇಕೆಗಳನ್ನು ಜಕ್ಕನಹಳ್ಳಿಗೆ ಕೊಂಡೊಯ್ದಿದ್ದಾರೆ. ಅಲ್ಲಿ ಅವುಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.

‘ಇಲ್ಲಿಯವರೆಗೂ ಕೊರೊನಾ ಸೋಂಕು ಕುರಿ, ಮೇಕೆಗಳ ಮೂಲಕ ಹರಡಿದೆ ಎಂಬುದಕ್ಕೆ ಆಧಾರವಿಲ್ಲ. ಆದರೂ  ಮೇಕೆಗಳ ಗಂಟಲು ಸ್ರಾವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ. ಅಲ್ಲಿಯವರೆಗೂ ಅವುಗಳನ್ನು ಪ್ರತ್ಯೇಕವಾಗಿಯೇ ಇರಿಸಲು ಕ್ರಮಕೈಗೊಳ್ಳಿ’ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು