ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಖಾಸಗಿ ಆಸ್ಪತ್ರೆಗಳು 2500 ಹಾಸಿಗೆ ಮೀಸಲಿಡಲೇಬೇಕು ಎಂದ ಸಿಎಂ ಯಡಿಯೂರಪ್ಪ

ಖಾಸಗಿ ಆಸ್ಪತ್ರೆ ಮಾಲೀಕರ ಜತೆ ಚರ್ಚೆ
Last Updated 29 ಜೂನ್ 2020, 10:26 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರ ನಿಗದಿ ಮಾಡಿರುವ ದರವನ್ನು ಒಪ್ಪಿಕೊಂಡು ಕೋವಿಡ್‌–19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಒಟ್ಟು 2,500 ಹಾಸಿಗೆಗಳನ್ನು ಮೀಸಲಿಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳ ಮಾಲೀಕರ ಜತೆಗಿನ ಚರ್ಚೆಯ ಮಧ್ಯೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಹೇಳಿದ್ದನ್ನು ಮಾಡಲೇಬೇಕಾಗುತ್ತದೆ ಎಂದು ತಿಳಿಸಿದರು.

ಕೋವಿಡ್‌ ಚಿಕಿತ್ಸೆಗಾಗಿ ಹಾಸಿಗೆಗಳನ್ನು ನೀಡಬೇಕು. ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಸರ್ಕಾರದ ಜತೆಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಬೇಕು ಎಂದರು.

ದೇಶದ ಉಳಿದ ಮೆಟ್ರೊ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕೋವಿಡ್‌ ನಿಯಂತ್ರಣದಲ್ಲಿದೆ. ಮುಂಬೈನಲ್ಲಿ 74,252 ಜನ ಸೋಂಕಿಗೆ ಒಳಗಾಗಿ, 47,329 ಜನ ಗುಣಮುಖರಾಗಿದ್ದು, 4284 ಜನ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ 49,301 ಜನರ ಸೋಂಕಿಗೆ ಒಳಗಾಗಿದ್ದು, 49,301 ಜನರ ಚೇತರಿಸಿಕೊಂಡು, 2580 ಜನ ಮೃತಪಟ್ಟಿದ್ದಾರೆ. ಚೆನ್ನೈನಲ್ಲಿ 51,699 ಜನ ಸೋಂಕಿಗೆ ಒಳಗಾಗಿದ್ದು, 31,045 ಜನ ಚೇತರಿಸಿಕೊಂಡಿದ್ದು, 733 ಜನ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೊಲ್ಕತ್ತಾದಲ್ಲಿ 5,402 ಮಂದಿ ಸೋಂಕಿಗೆ ಒಳಗಾಗಿದ್ದು, 3123 ಮಂದಿ ಗುಣಮುಖರಾಗಿ,350 ಜನ ಮೃತಪಟ್ಟಿದ್ದಾರೆ. ಆದರೆ ಬೆಂಗಳೂರಿನಲ್ಲಿ 3,321 ಮಂದಿ ಸೋಂಕಿಗೆ ಒಳಗಾಗಿ 433 ಜನ ಗುಣಮುಖರಾಗಿದ್ದು, 81 ಜನ ಮೃತಪಟ್ಟಿದ್ದಾರೆ. ಆದ್ದರಿಂದ ಯಾರೂ ಗಾಬರಿಗೆ ಒಳಗಾಗಬೇಕಾಗಿಲ್ಲ. ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸೋಂಕಿಗೆ ಒಳಗಾದವರನ್ನು ಆಸ್ಪತ್ರೆಗೆ ಸೇರಿಸಿ, ಉತ್ತಮ ಚಿಕಿತ್ಸೆ, ಆಹಾರವನ್ನು ನೀಡುತ್ತಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT