ಮಂಗಳವಾರ, ಜುಲೈ 27, 2021
27 °C

Covid-19 Karnataka Update | ಹೊಸದಾಗಿ 213 ಕೋವಿಡ್ ಪ್ರಕರಣ, ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus

ಬೆಂಗಳೂರು: ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಸಂಜೆ 5 ಗಂಟೆವರೆಗೆ ರಾಜ್ಯದಲ್ಲಿ ಹೊಸದಾಗಿ 213 ಕೋವಿಡ್ ಪ್ರಕರಣ ದೃಢಪಟ್ಟಿವೆ. ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,213ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 88 ತಲುಪಿದೆ. ಈವರೆಗೆ 4,135 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದು (ಭಾನುವಾರ) 180 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಹೊಸ ಪ್ರಕರಣಗಳ ಪೈಕಿ 23 ಮಂದಿ ವಿದೇಶಗಳಿಂದ ಬಂದವರಾಗಿದ್ದರೆ, 103 ಜನ ಬೇರೆ ರಾಜ್ಯಗಳಿಂದ ಬಂದವರು.

ಕಲಬುರಗಿಯಲ್ಲಿ ಅತಿ ಹೆಚ್ಚು, ಅಂದರೆ 48 ಹೊಸ ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ ಬೆಂಗಳೂರು ನಗರದಲ್ಲಿ 35, ಧಾರವಾಡದಲ್ಲಿ 34, ದಕ್ಷಿಣ ಕನ್ನಡ 23, ರಾಯಚೂರು 18, ಯಾದಗಿರಿ 13, ಬೀದರ್ 11, ಬಳ್ಳಾರಿ 10, ಕೊಪ್ಪಳ 4, ವಿಜಯಪುರ, ಶಿವಮೊಗ್ಗ, ಬಾಗಲಕೋಟೆಯಲ್ಲಿ ತಲಾ 3, ಉಡುಪಿ, ಹಾವೇರಿ, ರಾಮನಗರ ತಲಾ 2, ಹಾಸನ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು