ಶನಿವಾರ, ಜುಲೈ 24, 2021
27 °C

ಇಮ್ರಾನ್ ಪಾಷಾ ಕಾರು, 16 ಬೈಕ್ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ಹೋಗುವ ವೇಳೆ ಮೆರವಣಿಗೆ ನಡೆಸಿ ನಿಯಮ ಉಲ್ಲಂಘಿಸಿದ್ದ ಆರೋಪದಡಿ ಪಾದರಾಯನಪುರ ವಾರ್ಡ್ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಅವರನ್ನು ಪೊಲೀಸರು ಬಂಧಿಸಿದ್ದು, ಅವರ ಬೆನ್ಜ್‌ ಕಾರನ್ನೂ ಜಪ್ತಿ ಮಾಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಿಂದ ಪಾದರಾಯನಪುರದ ಮನೆಯವರೆಗೂ ಭಾನುವಾರ ನಡೆದ ಮೆರವಣಿಗೆಯಲ್ಲಿ ಪರಸ್ಪರ ಅಂತರವೂ ಇರಲಿಲ್ಲ. ಹಲವರು ಮಾಸ್ಕ್ ಸಹ ಧರಿಸಿರಲಿಲ್ಲ. ಹೀಗಾಗಿ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಇಮ್ರಾನ್ ಕಾರು ಹಾಗೂ ಅವರ ಬೆಂಬಲಿಗರ 16 ಬೈಕ್‌ಗಳನ್ನೂ ಜಪ್ತಿ ಮಾಡಲಾಗಿದೆ.

‘ಪಾದರಾಯನಪುರದಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಂಥ ಸಂದರ್ಭದಲ್ಲೇ ಅನುಮತಿ ಇಲ್ಲದೆ ಮೆರವಣಿಗೆ ಮಾಡಲಾಗಿದೆ. ಅಕ್ರಮವಾಗಿ ಗುಂಪು ಸೇರಿದ್ದ, ಸಾಂಕ್ರಾಮಿಕ ರೋಗ ಹರಡಲು ಯತ್ನಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿದಡಿ ಇಮ್ರಾನ್ ಪಾಷಾ ಸೇರಿ 22 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರೆಲ್ಲರನ್ನೂ ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೊತ್‌  ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು