ಸೋಮವಾರ, ಫೆಬ್ರವರಿ 24, 2020
19 °C
ಲೈಂಗಿಕ ಕಿರುಕುಳ ಆರೋಪ ಸಾಬೀತು

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಬಾಲಕನಿಗೆ ಕೋರ್ಟ್‌ ಶಿಕ್ಷೆ ಏನು ಗೊತ್ತೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಬಾಲಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ 52 ದಿನ ಉಚಿತವಾಗಿ ಕೆಲಸ ಮಾಡುವಂತೆ ಬಾಲ ನ್ಯಾಯ ಮಂಡಳಿ ಆದೇಶಿಸಿದೆ.

ಒಂದು ವರ್ಷ ಪ್ರತಿ ಶನಿವಾರ ಕೆಲಸ ಮಾಡಬೇಕು ಹಾಗೂ ₹10 ಸಾವಿರ ದಂಡ ಪಾವತಿಸುವಂತೆ ನ್ಯಾಯ ಮಂಡಳಿ ಆದೇಶದಲ್ಲಿ ತಿಳಿಸಿದೆ.

ಬಾಲಕಿಯ ಮೇಲೆ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಚಳ್ಳಕೆರೆ ತಾಲ್ಲೂಕಿನಲ್ಲಿ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಮತ್ತು ಪ್ರತಿವಾದ ಆಲಿಸಿದ ನ್ಯಾಯ ಮಂಡಳಿ ಆದೇಶ ಪ್ರಕಟಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು