ಭಾನುವಾರ, ಏಪ್ರಿಲ್ 5, 2020
19 °C

ಕೋವಿಡ್ | ಸರ್ಕಾರದ ಆದೇಶ ಉಲ್ಲಂಘನೆ: ಬೆಳಗಾವಿಯ ಶಾಲೆಗಳಿಗೆ ನೋಟಿಸ್ ನೀಡಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೋವಿಡ್‌–19 ವೈರಸ್‌ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ, ಬೆಳಗಾವಿಯ ಕೆಲವು ಶಾಲೆಗಳು ತೆರೆದಿರುವುದು ಶನಿವಾರ ಬೆಳಕಿಗೆ ಬಂದಿದೆ.

ನಗರದ ಕಾಲೇಜು ರಸ್ತೆಯಲ್ಲಿರುವ ಮಹಿಳಾ ವಿದ್ಯಾಲಯ ಹಾಗೂ ಅಶೋಕ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಶಾಲೆ ಎಂದಿನಂತೆ ಬೆಳಿಗ್ಗೆ ತೆರೆದಿದ್ದವು. ರಜೆಯ ಬಗ್ಗೆ ಮಾಹಿತಿ ಇರದ ಕೆಲವು ವಿದ್ಯಾರ್ಥಿಗಳು ಶಾಲೆಗೆ ಬಂದು, ಕೊಠಡಿಯಲ್ಲಿ ಆಸೀನರಾಗಿದ್ದರು. ಕೆಲವು ಮಕ್ಕಳು ಮೈದಾನದಲ್ಲಿ ಆಟವಾಡಿದರು.

ನೋಟಿಸ್‌ ನೀಡಲು ಸೂಚನೆ
‘ಶಾಲೆಗಳು ತೆರೆದಿರುವ ಬಗ್ಗೆ ಗಮನಕ್ಕೆ ಬರುತ್ತಿದ್ದಂತೆ ಸಿಬ್ಬಂದಿಯನ್ನು ಕಳುಹಿಸಿ, ಶಾಲೆಗಳನ್ನು ಮುಚ್ಚಿಸಿದ್ದೇವೆ. ಸರ್ಕಾರದ ಆದೇಶದ ಹೊರತಾಗಿಯೂ ಶಾಲೆಗಳನ್ನು ತೆರೆದಿರುವ ಆಡಳಿತ ಮಂಡಳಿಗೆ ನೋಟಿಸ್‌ ನೀಡುವಂತೆ ಬಿಇಒಗೆ ಸೂಚನೆ ನೀಡಿದ್ದೇನೆ’ ಎಂದು ಡಿಡಿಪಿಐ ಎ.ಬಿ. ಪುಂಡಲೀಕ ತಿಳಿಸಿದರು.

‘6ನೇ ತರಗತಿಯ ಮಕ್ಕಳಿಗೆ ರಜೆ ಘೋಷಿಸಲಾಗಿದೆ. 7 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳ ದಿನಗಳಂದು ಮಾತ್ರ ಶಾಲೆಗೆ ಬರಬೇಕು ಎಂದು ತಿಳಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು