ಮಂಗಳವಾರ, ಏಪ್ರಿಲ್ 7, 2020
19 °C

ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೋವಿಡ್-19 ದೃಢ: ಜಿಲ್ಲೆಯಲ್ಲಿ ಎರಡನೇ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು (ಕೋವಿಡ್–19) ತಗುಲಿರುವುದು ದೃಢಪಟ್ಟಿದೆ.

ಸುಮಾರು 45 ವರ್ಷದ ವ್ಯಕ್ತಿ ದುಬೈನಿಂದ ಬಂದು ಬೆಂಗಳೂರಿಂದ ಟ್ಯಾಕ್ಸಿಯಲ್ಲಿ ಮೈಸೂರು ನಗರಕ್ಕೆ ಬಂದಿದ್ದರು ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ದುಬೈನಿಂದ ಮೈಸೂರಿಗೆ ಬಂದಿದ್ದ 35 ವರ್ಷದ ವ್ಯಕ್ತಿಯಲ್ಲೂ ಕೋವಿಡ್ 19 ದೃಢಪಟ್ಟಿತ್ತು. ಇದರೊಂದಿಗೆ ಜಿಲ್ಲೆಯಲ್ಲಿ ಎರಡು ಪ್ರಕರಣ ದಾಖಲಾದಂತಾಗಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸೋಮವಾರ ಬೆಳಿಗ್ಗೆ ತಿಳಿಸಿದ್ದರು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು