ಬೆಂಗಳೂರು: ವೆಂಟಿಲೇಟರ್ ಸಂಪರ್ಕದಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿಗೆ ನಗರದಲ್ಲಿ ನಡೆಸಿದ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ.

ಮೂರು ದಿನಗಳ ಹಿಂದಷ್ಟೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿಗೆ ನಡೆಸಿದ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿತ್ತು. ಅದರ ಬೆನ್ನಲ್ಲೇ ಇನ್ನೊಬ್ಬ ವ್ಯಕಿ ಥೆರಪಿಯಿಂದ ಗುಣಮುಖರಾಗುತ್ತಿರುವುದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಭರವಸೆಯನ್ನುಂಟು ಮಾಡಿದೆ. ಕ್ಯಾನ್ಸರ್ ತಜ್ಞ ಡಾ. ವಿಶಾಲ್ ರಾವ್ ನೇತೃತ್ವದ ವೈದ್ಯರ ತಂಡ ಥೆರಪಿ ಮಾಡಿದೆ. ಸೋಂಕಿತ ವ್ಯಕಿಯನ್ನು ಸಾಮಾನ್ಯ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

‘ಮೇ. 25 ರಂದು ವ್ಯಕ್ತಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಮಧುಮೇಹ ಸೇರಿಂದತೆ ವಿವಿಧ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಸ್ಥಿತಿ ಗಂಭೀರವಾಗಿತ್ತು. ಅಂತಿಮವಾಗಿ ಪ್ಲಾಸ್ಮಾ ಥೆರಪಿ ಮಾಡಲು ನಿರ್ಧರಿಸಿದೆವು. ವ್ಯಕ್ತಿಗೆ ಮೇ.27ರಂದು ಫ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗಿತ್ತು. ಈಗ ಅವರು ಚೇತರಿಸಿಕಳ್ಳುತ್ತಿದ್ದಾರೆ’ಎಂದು ಡಾ. ವಿಶಾಲ್ ರಾವ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.