ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: ಮತ್ತೆ 17 ಮಂದಿಯಲ್ಲಿ ಸೋಂಕು

ನೂರರ ಗಡಿ ದಾಟಿದ ಕೋವಿಡ್‌–19 ಪ್ರಕರಣಗಳು
Last Updated 30 ಮಾರ್ಚ್ 2020, 18:36 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕೇರಳದ ಕಾಸರ‌ಗೋಡು ಜಿಲ್ಲೆಯಲ್ಲಿ ಮತ್ತೆ 17 ಮಂದಿಯಲ್ಲಿ ಕೋವಿಡ್‌–19 ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕು ತಗುಲಿರುವವರ ಸಂಖ್ಯೆ 106ಕ್ಕೇರಿದೆ.

ಮಾರ್ಚ್‌ 16ರಂದು ಕಾಸರಗೋಡು ಜಿಲ್ಲೆಯಲ್ಲಿ ಮೊದಲ ಕೋವಿಡ್‌–19 ಪ್ರಕರಣ ದೃಢಪಟ್ಟಿತ್ತು. ಆ ಬಳಿಕ ಸೋಂಕು ತಗುಲಿರುವವರ ಸಂಖ್ಯೆ ಏರುತ್ತಲೇ ಇದೆ. ಶುಕ್ರವಾರ ಒಂದೇ ದಿನ 34 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಈಗ ಮತ್ತೆ ದೊಡ್ಡ ಸಂಖ್ಯೆಯಲ್ಲಿ ಹೊಸ ಪ್ರಕರಣಗಳ ವರದಿಗಳು ಲಭಿಸಿವೆ.

ಕೇರಳ ರಾಜ್ಯದಲ್ಲಿ ಇನ್ನೂ 32 ಮಂದಿಯಲ್ಲಿ ಸೋಂಕು ಇರುವುದು ಸೋಮವಾರ ಖಚಿತವಾಗಿದೆ. ಈ ಪೈಕಿ 17 ಮಂದಿ ಕಾಸರಗೋಡಿನವರು. 11 ಜನರು ನೆರೆಯ ಕಣ್ಣೂರು ಜಿಲ್ಲೆಯವರು. ವಯನಾಡು ಮತ್ತು ಇಡುಕ್ಕಿ ಜಿಲ್ಲೆಗಳ ತಲಾ ಇಬ್ಬರಿಗೆ ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ ಎಂದು ಕೇರಳ ಸರ್ಕಾರದ ಆರೋಗ್ಯ ಇಲಾಖೆ ತಿಳಿಸಿದೆ.

ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 7,437 ಜನರ ಮೇಲೆ ನಿಗಾ ಇರಿಸಿದ್ದು, 7,303 ಮಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. 623 ಜನರನ್ನು ಆಸ್ಪತ್ರೆಗೆ ದಾಖಲಿಸಿ, ಐಸೋಲೇಷನ್‌ ವಾರ್ಡ್‌ಗಳಲ್ಲಿ ಇರಿಸಲಾಗಿದೆ. ಸೋಮವಾರ ಒಂದೇ ದಿನ 126 ಜನರನ್ನು ಐಸೋಲೇಷನ್‌ ವಾರ್ಡ್‌ಗಳಿಗೆ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT