ಸೋಮವಾರ, ಜೂನ್ 1, 2020
27 °C

ಮೈಸೂರಿನಲ್ಲಿ ಒಂದೇ ದಿನ ಐವರಿಗೆ 'ಕೋವಿಡ್–19' ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 5 ಮಂದಿಗೆ ‘ಕೋವಿಡ್–19’ ಪ್ರಕರಣಗಳು ದೃಢಪಟ್ಟಿದ್ದು, ಆತಂಕವನ್ನು ಇಮ್ಮಡಿಸಿವೆ.

ನಂಜನಗೂಡಿನಲ್ಲಿ 4 ಮಂದಿಗೆ ಹಾಗೂ ಮೈಸೂರು ನಗರ ನಿವಾಸಿಯೊಬ್ಬರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.

ಮೊನ್ನೆಯಷ್ಟೇ ನಂಜನಗೂಡಿನ ಔಷಧ ತಯಾರಿಕಾ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಲ್ಲಿ ಕೋವಿಡ್ ಪತ್ತೆಯಾಗಿತ್ತು. ಈಗ ಪತ್ತೆಯಾಗಿರುವ ಐವರು ಇದೇ ಕಾರ್ಖಾನೆಯ ನೌಕರರಾಗಿದ್ದಾರೆ. ನಂಜನಗೂಡು ಪಟ್ಟಣವನ್ನು ಶನಿವಾರ ರಾತ್ರಿಯಿಂದಲೇ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು