ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 150ರ ಗಡಿ ದಾಟಿದ ಕೋವಿಡ್–19

ದೆಹಲಿಯ ಧಾರ್ಮಿಕ ಸಭೆಯಲ್ಲಿ ‍ಪಾಲ್ಗೊಂಡಿದ್ದ 21 ಮಂದಿಗೆ ಸೋಂಕು ದೃಢ
Last Updated 5 ಏಪ್ರಿಲ್ 2020, 20:24 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಭಾನುವಾರ ಒಂದೇ ದಿನ ಹೊಸದಾಗಿ 7 ಕೋವಿಡ್‌–19 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 151ಕ್ಕೆ ತಲುಪಿದೆ.

ಮಾರ್ಚ್‌ 9ರಂದು ಬೆಂಗಳೂರಿನಲ್ಲಿ ವರದಿಯಾದ ಕೋವಿಡ್‌–19 ಪ್ರಕರಣ ರಾಜ್ಯದಾದ್ಯಂತ ವ್ಯಾಪಿಸಿಕೊಳ್ಳುತ್ತಿದ್ದು, ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಳಗಾವಿಯಲ್ಲಿ 4, ಬೆಂಗಳೂರಿನಲ್ಲಿ 2 ಹಾಗೂ ಬಳ್ಳಾರಿಯಲ್ಲಿ ಒಂದು ಪ್ರಕರಣ ಹೊಸದಾಗಿ ವರದಿಯಾಗಿದೆ. ಇದರಲ್ಲಿ 5 ಮಂದಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಗ್ ಜಮಾತ್ ಕೇಂದ್ರ ಕಚೇರಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿಭಾಗವಹಿಸಿದ್ದರು. ಇದರಿಂದಾಗಿ ಅಲ್ಲಿಗೆ ಹೋಗಿ ಬಂದವರಲ್ಲಿ ಈವರೆಗೆ 21 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಗಳಿಂದ ದೃಢಪಟ್ಟಿದೆ. ಬೆಂಗಳೂರಿನಲ್ಲಿ ವರದಿಯಾಗಿರುವ ಎರಡೂ ಪ್ರಕರಣಗಳಲ್ಲಿ ಸೋಂಕಿತರು ದುಬೈಗೆ ಪ್ರಯಾಣ ಮಾಡಿದ್ದರು.

‌56 ಮಂದಿಯನ್ನು ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಭಾನುವಾರ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿಕೊಳ್ಳಲಾಗಿದೆ. 482 ಮಂದಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಸಂಗ್ರಹಿಸಲಾಗಿದೆ. 1,469 ಮಂದಿಯನ್ನು ಕ್ವಾರಂಟೈನ್‌ ಕೇಂದ್ರದಲ್ಲಿ ಹಾಗೂ 516 ಮಂದಿಯನ್ನು ಮನೆಯಲ್ಲಿಯೇ ಇರಿಸಲಾಗಿದೆ.

ಈವರೆಗೆ ಸೋಂಕಿಗೆ ನಾಲ್ವರು ಮೃತಪಟ್ಟಿದ್ದಾರೆ. 12 ಮಂದಿ ಚಿಕಿತ್ಸೆಯಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರಿಂದಾಗಿ ಸದ್ಯ ರಾಜ್ಯದ ವಿವಿಧ ಆಸ್ಪ‍ತ್ರೆಗಳಲ್ಲಿ 135 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಒಬ್ಬರಿಗೆ ಆಕ್ಸಿಜನ್ ಸಂಪರ್ಕ ಕಲ್ಪಿಸಿದ್ದು, ಇಬ್ಬರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿದೆ.

‘ಪರೀಕ್ಷೆಗೂ ಮುನ್ನ ಪುನರ್‌ಮನನ ತರಗತಿ’

ಚಾಮರಾಜನಗರ: ಹೊಸ ವೇಳಾಪಟ್ಟಿ ಪ್ರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವುದಕ್ಕೂ ಮುನ್ನ ರಾಜ್ಯದಾದ್ಯಂತ ಎಲ್ಲ ಶಾಲೆಗಳಲ್ಲಿ ಒಂದು ವಾರ ಪುನರ್‌ಮನನ ತರಗತಿಗಳನ್ನು ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ಅವರು ಭಾನುವಾರ ತಿಳಿಸಿದರು.

ತಾಲ್ಲೂಕಿನ ಪುಣಜನೂರು ಚೆಕ್‌ಪೋಸ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ದಿಗ್ಬಂಧನದಿಂದಾಗಿ ಮಕ್ಕಳಿಗೆ ಸುದೀರ್ಘ ರಜೆ ಸಿಕ್ಕಿದೆ. ಅವರನ್ನು ಮತ್ತೆ ಪರೀಕ್ಷಾ ಮೂಡ್‌ಗೆ ತರಬೇಕಾಗಿದೆ. ಏಪ್ರಿಲ್‌ 14ರ ನಂತರ ಪ‍ರಿಸ್ಥಿತಿ ಅವಲೋಕಿಸಿ ಹೊಸ ವೇಳಾಪಟ್ಟಿ ಸಿದ್ಧಪಡಿಸುತ್ತೇವೆ’ ಎಂದುಹೇಳಿದರು.

ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳು:151

ಬೆಂಗಳೂರು; 57

ಮೈಸೂರು; 28

ದಕ್ಷಿಣ ಕನ್ನಡ; 12

ಬೀದರ್; 10

ಉತ್ತರ ಕನ್ನಡ; 08

ಚಿಕ್ಕಬಳ್ಳಾಪುರ; 07

ಬೆಳಗಾವಿ; 07

ಬಳ್ಳಾರಿ; 06

ಕಲಬುರ್ಗಿ; 05

ದಾವಣಗೆರೆ; 03

ಉಡುಪಿ; 03

ಧಾರವಾಡ; 01

ತುಮಕೂರು; 01

ಕೊಡಗು; 01

ಬಾಗಲಕೋಟೆ; 01

ಬೆಂಗಳೂರು ಗ್ರಾಮಾಂತರ; 01

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT