ಶನಿವಾರ, ಮಾರ್ಚ್ 28, 2020
19 °C

ಕೋವಿಡ್‌–19: ರಜೆ ಉದ್ದೇಶದಿಂದ ಕೆಮ್ಮು, ವಾಂತಿ ನಾಟಕವಾಡಿದ ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗೊರಸಾಣೆ ಸರ್ಕಾರಿ ಶಾಲೆಯಲ್ಲಿ ಕೋವಿಡ್‌–19 (ಕೊರೊನಾ) ವೈರಸ್ ಬಗ್ಗೆ ಶಾಲೆಯ ಸಹ ಶಿಕ್ಷಕ ಪ್ರೇಮ್ ಕುಮಾರ್ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದ ನಂತರ 7 ಮಕ್ಕಳು ಸುಸ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಸುಧಾರಿಸಿಕೊಂಡಿದ್ದಾರೆ.

ಗೋರಸಾಣಿ ಶಾಲೆಯಲ್ಲಿ ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸುತ್ತಿದ್ದಾಗ 7 ವಿದ್ಯಾರ್ಥಿಗಳು ರಜೆ ಸಿಗುತ್ತದೆ ಎಂಬ ಉದ್ದೇಶದಿಂದ ಕೆಮ್ಮು ವಾಂತಿ ಮಾಡಿಕೊಂಡಿದ್ದಾರೆ. ಬಳಿಕ ಮಹದೇಶ್ವರ ಬೆಟ್ಟದ  ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ತದನಂತರ ಎಲ್ಲಾ ವಿದ್ಯಾರ್ಥಿಗಳ ರಕ್ತದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ನಂತರ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಥಮ ಚಿಕಿತ್ಸೆ ನೀಡಿ ಮತ್ತೆ ಶಾಲೆಗೆ ಕಳುಹಿಸಿ ಕೊಟ್ಟಿದ್ದಾರೆ. 

ಸರ್ಕಾರದ ಆದೇಶದಂತೆ ಗುರುವಾರ ಶಾಲೆಯಲ್ಲಿ ಕೊರೊನಾ ವೈರಸ್ ಬಗ್ಗೆ  ಅಲ್ಲಿನ ಶಿಕ್ಷಕ ಪ್ರೇಮ್ ಕುಮಾರ್ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕೊರೊನಾ ವೈರಸ್ ಸೋಂಕು ಇದ್ದರೆ ಶಾಲೆಯಿಂದ ರಜೆ ಸಿಗುತ್ತದೆ ಎಂದು ಮೊದಲಿಗೆ ಮೂರು ಮಕ್ಕಳು ಅಸ್ವಸ್ಥಗೊಂಡವರಂತೆ ನಟಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತಂದು ತಪಾಸಣೆ ನಡೆಸಿದಾಗ ಯಾವುದೇ ಸಮಸ್ಯೆ ಇಲ್ಲದಿರುವ ಬಗ್ಗೆ ವೈದ್ಯರು ತಿಳಿಸಿದರು. 

ನಂತರ ಶಾಲೆಯಲ್ಲಿ ಇನ್ನು 4 ಇದೇ ರೀತಿಯಲ್ಲಿ ಅಸ್ವಸ್ಥಗೊಂಡವರಂತೆ ನಟಿಸಿದ್ದಾರೆ. ವೈದ್ಯರ ತಂಡ ಶಾಲೆಗೆ ಭೇಟಿ ನೀಡಿ ಕುಡಿಯುವ ನೀರು ಹಾಗೂ ಮಕ್ಕಳ ತಪಾಸಣೆ ನಡೆಸಿ ಯಾವುದೇ ಸೋಂಕು ಇಲ್ಲ‌ ಎಂದು ದೃಢಪಡಿಸಿದ್ದಾರೆ. ಶುಕ್ರವಾರ ಎಂದಿನಂತೆ ಮಕ್ಕಳು ಶಾಲೆಗೆ ಆಗಮಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್ ಸ್ವಾಮಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು