ಶನಿವಾರ, ಜುಲೈ 31, 2021
27 °C
ಜುಲೈ 2ರಂದು ಗೋವಾದಿಂದ ಮರಳಿದ್ದನು; ಜಿಲ್ಲೆಯಲ್ಲಿ ಸತ್ತವರ ಸಂಖ್ಯೆ ಏಳಕ್ಕೆ ಏರಿಕೆ

ಬಾಗಲಕೋಟೆಯಲ್ಲಿ ಕೋವಿಡ್‌ಗೆ 30 ವರ್ಷದ ಯುವಕ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಗುಳೇದಗುಡ್ಡ ತಾಲ್ಲೂಕು ಹಾನಾಪುರ (ಎಲ್‌ಟಿ) ಗ್ರಾಮದಲ್ಲಿ ಅನಾರೋಗ್ಯದಿಂದ ಜುಲೈ 5ರಂದು ಸಾವಿಗೀಡಾಗಿದ್ದ 30 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್–19ಗೆ ಬಲಿಯಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಗೋವಾದಿಂದ ಜುಲೈ 2ರಂದು ವಾಪಸ್ ಮರಳಿದ್ದ ಯುವಕ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಮೂರು ದಿನಗಳ ನಂತರ ಸಾವಿಗೀಡಾಗಿದ್ದನು. ಕೋವಿಡ್ ಲಕ್ಷಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಯಮಾವಳಿಗಳ ಅನ್ವಯವೇ ಅಂತ್ಯಕ್ರಿಯೆ ನಡೆಸಿತ್ತು. ಇದೀಗ ಯುವಕನ ಗಂಟಲು ದ್ರವ ಮಾದರಿ ಪರೀಕ್ಷೆಯ ಫಲತಾಂಶದಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಯುವಕನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ 40 ಮಂದಿಯನ್ನು ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು