ಗುರುವಾರ , ಜೂಲೈ 9, 2020
28 °C

Covid-19 Karnataka Update | ರಾಜ್ಯದಲ್ಲಿ 93 ಹೊಸ ಪ್ರಕರಣ, ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus

ಬೆಂಗಳೂರು: ಮೇ 24ರ ಸಂಜೆ 5ಗಂಟೆಯಿಂದ ಮೇ 25ರ ಸಂಜೆ 5 ಗಂಟೆವರೆಗೆ ರಾಜ್ಯದಾದ್ಯಂತ 93 ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಈ ಮೂಲಕ ರಾಜ್ಯದಲ್ಲಿ 2,182 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 44 ಮಂದಿ ಇದುವರೆಗೂ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದುವರೆಗೂ 705 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,431 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ಇಂದು ಬೆಂಗಳೂರು ನಗರದಲ್ಲಿ 8, ಮಂಡ್ಯ 2, ಕಲಬುರಗಿ 16, ಬೆಳಗಾವಿ 1, ಯಾದಗಿರಿ 15, ಉಡುಪಿ 32, ಹಾಸನ 1, ವಿಜಯಪುರ 1, ಉತ್ತರ ಕನ್ನಡ 1, ದಕ್ಷಿಣ ಕನ್ನಡ 4, ಧಾರವಾಡ 4, ಬಳ್ಳಾರಿ 3, ತುಮಕೂರು 1, ಕೋಲಾರ 2 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು