ಭಾನುವಾರ, ಆಗಸ್ಟ್ 1, 2021
26 °C

Covid-19 Karnataka Update | ಒಂದೇ ದಿನ 239 ಹೊಸ ಪ್ರಕರಣ, ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜೂನ್ 06ರ ಸಂಜೆ 5ಗಂಟೆಯಿಂದ ಜೂನ್ 07ರ ಸಂಜೆ 5 ಗಂಟೆವರೆಗೆ ಹೊಸ 239 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ 5,452 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೂ 61 ಮಂದಿ ಮೃತಪಟ್ಟಿದ್ದಾರೆ. 

ಈವರೆಗೆ 2,132 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,257 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ಇಂದು ಕಲಬುರಗಿಯಲ್ಲಿ 39, ಯಾದಗಿರಿಯಲ್ಲಿ 39, ಬೆಳಗಾವಿ 38, ಬೆಂಗಳೂರು ನಗರ 23, ದಕ್ಷಿಣ ಕನ್ನಡ 17, ದಾವಣಗೆರೆ 17, ಉಡುಪಿ 13, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ 2, ಉತ್ತರ ಕನ್ನಡ 2 ಮತ್ತು ಮಂಡ್ಯ  ಹಾಗೂ ರಾಯಚೂರಿನಲ್ಲಿ ತಲಾ ಒಂದು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು