ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | ದಿನದಲ್ಲಿ 308 ಹೊಸ ಕೋವಿಡ್ ಪ್ರಕರಣ, ಮೂರು ಸಾವು

Last Updated 8 ಜೂನ್ 2020, 12:51 IST
ಅಕ್ಷರ ಗಾತ್ರ

ಬೆಂಗಳೂರು: ಜೂನ್ 07ರ ಸಂಜೆ 5ಗಂಟೆಯಿಂದ ಜೂನ್ 08ರ ಸಂಜೆ 5 ಗಂಟೆವರೆಗೆ 308 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ 5,760 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೂ 64 ಮಂದಿ ಮೃತಪಟ್ಟಿದ್ದಾರೆ.

ಈವರೆಗೆ 2,519 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,175 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 14 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಕಲಬುರಗಿಯಲ್ಲಿ 99, ಯಾದಗಿರಿಯಲ್ಲಿ 66, ಬೀದರ್ 48, ಉಡುಪಿ 45, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ 1 ಮತ್ತು ರಾಮನಗರದಲ್ಲಿ 1 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT