ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | 161 ಹೊಸ ಕೋವಿಡ್-19 ಪ್ರಕರಣ, ಇಬ್ಬರು ಸಾವು

Last Updated 9 ಜೂನ್ 2020, 12:49 IST
ಅಕ್ಷರ ಗಾತ್ರ

ಬೆಂಗಳೂರು: ಜೂನ್ 08ರ ಸಂಜೆ 5 ಗಂಟೆಯಿಂದ ಜೂನ್ 09ರ ಸಂಜೆ 5 ಗಂಟೆವರೆಗೆ 161 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ 5,921 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೂ 66 ಮಂದಿ ಮೃತಪಟ್ಟಿದ್ದಾರೆ.

ಈವರೆಗೆ 2,605 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,248 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 12 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಯಾದಗಿರಿಯಲ್ಲಿ 61, ಬೆಂಗಳೂರು ನಗರ 29, ದಕ್ಷಿಣ ಕನ್ನಡ 23, ಕಲಬುರಗಿ 10, ಬೀದರ್ 09, ದಾವಣಗೆರೆ 8, ಕೊಪ್ಪಳ 6, ಶಿವಮೊಗ್ಗ 4, ವಿಜಯಪುರ 2, ಚಿಕ್ಕಬಳ್ಳಾಪುರ 2, ಮೈಸೂರು 2, ಧಾರವಾಡ 2 ಮತ್ತು ಬಾಗಲಕೋಟೆ ಮತ್ತು ತುಮಕೂರಿನಲ್ಲಿ ತಲಾ ಒಂದು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT