ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ, 5 ಸಾವು

ಅಕ್ಷರ ಗಾತ್ರ

ಬೆಂಗಳೂರು: ಜೂನ್ 13ರ ಸಂಜೆ 5 ಗಂಟೆಯಿಂದ ಜೂನ್ 14ರ ಸಂಜೆ 5 ಗಂಟೆವರೆಗೆ 176 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ 7,000 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೂ 86 ಮಂದಿ ಮೃತಪಟ್ಟಿದ್ದಾರೆ.

ಈವರೆಗೆ 3,955 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,956 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 16 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಬೆಂಗಳೂರು ನಗರ 42, ಯಾದಗಿರಿ 22, ಉಡುಪಿ 21, ಬೀದರ್ 20, ಕಲಬುರಗಿ 13, ಧಾರವಾಡ 10, ಬಳ್ಳಾರಿ 8, ಕೋಲಾರ 7, ಉತ್ತರ ಕನ್ನಡ 6, ಮಂಡ್ಯ 5, ದಕ್ಷಿಣ ಕನ್ನಡ 5, ಬಾಗಲಕೋಟೆ 4, ರಾಮನಗರ 3, ರಾಯಚೂರು 2, ಶಿವಮೊಗ್ಗ 2, ಬೆಳಗಾವಿ 1 ಮತ್ತು ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ ಮತ್ತು ಹಾವೇರಿಯಲ್ಲಿ ತಲಾ ಒಂದೊಂದು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT