ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ಹೆಡ್‌ ಕಾನ್‌ಸ್ಟೆಬಲ್‌, ಜಿ.ಪಂ ಸಿಬ್ಬಂದಿಗೂ ಕೋವಿಡ್‌–19

Last Updated 25 ಮೇ 2020, 16:13 IST
ಅಕ್ಷರ ಗಾತ್ರ

ಉಡುಪಿ: ಭಾನುವಾರ ಜಿಲ್ಲೆಯಲ್ಲಿ ಪತ್ತೆಯಾದ 32 ಕೋವಿಡ್‌ ಸೋಂಕಿತರಲ್ಲಿ ಹೆಡ್‌ ಕಾನ್‌ಸ್ಟೆಬಲ್‌ ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೂ ಸೇರಿದ್ದಾರೆ.

ಕಂಟೈನ್‌ಮೆಂಟ್ ಝೋನ್ ಸಂಪರ್ಕದಿಂದಾಗಿ ಹೆಡ್‌ ಕಾನ್‌ಸ್ಟೆಬಲ್‌ಗೆ ಸೋಂಕು ತಗುಲಿದ್ದು, ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನೂ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಸ್ಯಾನಿಟೈಸ್‌ ಮಾಡಲಾಗುವುದು ಎಂದು ಎಸ್‌ಪಿ ವಿಷ್ಣುವರ್ಧನ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ 30 ವರ್ಷದ ವ್ಯಕ್ತಿಗೂ ಸೋಂಕು ತಗುಲಿದ್ದು, ಮೇ 19ರ ಬೆಳಿಗ್ಗೆ ಅವರು ಕಚೇರಿಗೆ ಬಂದಾಗ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಅವರ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸೋಮವಾರ ಬಂದ ವರದಿಯಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್ ಮಾಹಿತಿ ನೀಡಿದರು.

ಈದ್ ಅಂಗವಾಗಿ ಸೋಮವಾರ ರಜೆ ಇದ್ದ ಕಾರಣ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿಲ್ಲ. ಮಂಗಳವಾರ ಇಡೀ ಕಚೇರಿಯನ್ನು ಸ್ವಚ್ಛಗೊಳಿಸಿ ಮುಚ್ಚಲಾಗುವುದು. ಸೋಂಕಿತ ವ್ಯಕ್ತಿಯ ಜತೆಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದ 4 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಉಳಿದವರನ್ನು ಮಂಗಳವಾರ ಪರೀಕ್ಷೆಗೊಳಪಡಿಸಲಾಗುವುದು. ಸಂಪರ್ಕಿತರೆಲ್ಲರನ್ನೂಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT