ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,319ಕ್ಕೆ: ಮತ್ತೆ ಮೂವರ ಸಾವು

Last Updated 11 ಜೂನ್ 2020, 21:34 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂಗಳೂರಿನಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್‌ನಿಂದ‌ ಸಾವಿಗೀಡಾದವರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.

ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್‌ನಲ್ಲಿ 74, ಯಾದಗಿರಿಯಲ್ಲಿ 66 ಸೇರಿದಂತೆರಾಜ್ಯದಲ್ಲಿ 278 ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ‌ಕೊರೊನಾ ಸೋಂಕಿತರ ಸಂಖ್ಯೆ 6,319ಕ್ಕೆ ತಲುಪಿದೆ. ಕೋವಿಡ್‌ ಪೀಡಿತರಲ್ಲಿ 157 ಮಂದಿ ಅನ್ಯ ರಾಜ್ಯಗಳಿಂದ ಬಂದವರೇ ಆಗಿದ್ದಾರೆ. ಮೂರು ದಿನಗಳಿಂದ ಒಂದೂ ಪ್ರಕರಣ ವರದಿಯಾಗದಿದ್ದ ಉಡುಪಿಯಲ್ಲಿ 22 ಮಂದಿಗೆ ಸೋಂಕು ತಗುಲಿದೆ. 114 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಬೆಂಗಳೂರಿನಲ್ಲಿ 17, ಕಲಬುರ್ಗಿಯಲ್ಲಿ 16,ರಾಯಚೂರಿನಲ್ಲಿ 15, ಬೀದರ್‌ನಲ್ಲಿ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9, ಕೋಲಾರದಲ್ಲಿ 6, ಮೈಸೂರಿನಲ್ಲಿ 5, ರಾಮನಗರದಲ್ಲಿ 5, ವಿಜಯಪುರದಲ್ಲಿ 4, ಬಾಗಲಕೋಟೆಯಲ್ಲಿ 3, ಉತ್ತರ ಕನ್ನಡದಲ್ಲಿ 3, ದಕ್ಷಿಣ ಕನ್ನಡದಲ್ಲಿ 2, ಹಾಸನದಲ್ಲಿ 2, ಧಾರವಾಡದಲ್ಲಿ 2 ಹಾಗೂ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಪ್ಪಳದಲ್ಲಿ ತಲಾ ಒಂದು ಪ್ರಕರಣ ಹೊಸದಾಗಿ ವರದಿಯಾಗಿವೆ.

ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ (ಐಎಲ್‌ಐ) ಬಳಲುತ್ತಿದ್ದ ಬೆಂಗಳೂರಿನ 35 ವರ್ಷದ ವ್ಯಕ್ತಿ ಜೂ.7ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಯಿಂದಲೂ ಬಳಲುತ್ತಿದ್ದ ಅವರು ಜೂನ್‌ 10ರಂದು ಮೃತಪಟ್ಟಿದ್ದರು. 60 ವರ್ಷದ ವ್ಯಕ್ತಿ ಕೂಡ ಐಎಲ್ಐ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಜೂನ್‌ 11ರಂದು ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಾಯಚೂರಿನ28 ವರ್ಷದ ಮಹಿಳೆಮೇ 30ರಂದು ಆಸ್ಪತ್ರೆಗೆ ದಾಖಲಾಗಿ, ಜೂನ್‌ 8ರಂದು ನಿಧನರಾಗಿದ್ದಾರೆ. ಈ ಮೂವರು ಕೋವಿಡ್‌ನಿಂದ ಬಳಲುತ್ತಿದ್ದರು.

ಗುಣಮುಖರ ಸಂಖ್ಯೆ ಹೆಚ್ಚು
ನವದೆಹಲಿ: ದೇಶದಲ್ಲಿ ಕೋವಿಡ್ ಬಾಧಿತರ ಸಂಖ್ಯೆ ಗುರುವಾರ ಬೆಳಿಗ್ಗೆ ವೇಳೆಗೆ 2.86 ಲಕ್ಷ ತಲುಪಿದೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 8,102ಕ್ಕೆ ತಲುಪಿದೆ.ಆದರೆ, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು.

ಕೇಂದ್ರ ಆರೋಗ್ಯ ಸಚಿವಾಲಯದ ವರದಿ ಪ್ರಕಾರ ಗುರುವಾರ ಬೆಳಿಗ್ಗೆವರೆಗೆ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ2,88,731. ಅದಕ್ಕೂ ಹಿಂದಿನ 24 ಗಂಟೆಗಳಲ್ಲಿ 9,997 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಕೋವಿಡ್‌ನಿಂದ 631 ಜನರು ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಗುಣಮುಖರಾಗಿ1,41,029 ಜನ ಮನೆಗೆ ವಾಪಸ್ ಆಗಿದ್ದಾರೆ. ಹೀಗಾಗಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,37,447 ಆಗಿದೆ. ಆದರೆ, ಪ್ರತಿದಿನ ಗುಣಮುಖಆಗುತ್ತಿರುವವರಿಗಿಂತ (5,824), ಸೋಂಕಿಗೆ ತುತ್ತಾಗುತ್ತಿರುವವರ (9,997) ಸಂಖ್ಯೆ ಹೆಚ್ಚು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT