ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

526 ಸೋಂಕಿತರಿಗೆ ಮಹಾರಾಷ್ಟ್ರದ ನಂಟು

ರಾಜ್ಯದಲ್ಲಿ ಈವರೆಗೆ 1,743 ಜನರಲ್ಲಿ ಕೋವಿಡ್‌–19 ದೃಢ l ಮಂಡ್ಯ, ಚಿಕ್ಕಬಳ್ಳಾಪುರ, ಹಾಸನ ಜಿಲ್ಲೆಗಳಿಗೆ ಸಂಕಟ
Last Updated 22 ಮೇ 2020, 21:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ವರದಿಯಾದ ಕೋವಿಡ್‌ ಪ್ರಕರಣಗಳಲ್ಲಿ 526 ಮಂದಿ ಮಹಾರಾಷ್ಟ್ರದ ನಂಟನ್ನು ಹೊಂದಿದವರಾಗಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರಿಕೆಯಾಗುತ್ತಿದ್ದು, ಅನ್ಯ ರಾಜ್ಯಗಳಿಂದ ತವರೂರಿಗೆ ವಾಪಸ್‌ ಆದವರು
ಸೋಂಕಿತರಾಗುತ್ತಿದ್ದಾರೆ. ಅದರಲ್ಲಿಯೂ ಮಹಾರಾಷ್ಟ್ರದ ಮುಂಬೈನಿಂದ ಬಂದವರು ರೋಗಿಗಳಾಗಿ ಆಸ್ಪತ್ರೆಗಳನ್ನು
ಸೇರುತ್ತಿದ್ದಾರೆ. ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಹಾಸನ ಜಿಲ್ಲೆಗಳಿಗೆ ಮಹಾರಾಷ್ಟ್ರದ ನಂಟು ಸಂಕಟವನ್ನು ತಂದೊಡ್ಡಿದೆ. ಕ್ವಾರಂಟೈನ್‌ಗೆ ಒಳಗಾದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.ಏ.24 ರಿಂದ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಹೆಸರು ನೋಂದಾಯಿಸಿಕೊಂಡು, ಮಹಾರಾಷ್ಟ್ರದ ರಾಜ್ಯಕ್ಕೆ ಬಂದವರಲ್ಲಿ 526 ಮಂದಿ ಸೋಂಕಿತರಾಗಿದ್ದಾರೆ. ಇದಕ್ಕೂ ಮೊದಲು ಬಂದು, ಸೋಂಕಿತರಾದವರ ಮಾಹಿತಿ ಆರೋಗ್ಯ ಇಲಾಖೆಯ ಬಳಿಯಿಲ್ಲ.

ರಾಜ್ಯದಲ್ಲಿ ಈವರೆಗೆ ವರದಿಯಾದ 1,743 ಪ್ರಕರಣಗಳ ಪೈಕಿ, 763 ಮಂದಿ ರೋಗಿಗಳ ನೇರ ಹಾಗೂ ಪರೋಕ್ಷ ಸಂಪರ್ಕದಿಂದ ಸೋಂಕಿತರಾಗಿದ್ದಾರೆ. ಮಂಡ್ಯದಲ್ಲಿ ವರದಿಯಾದ 209 ಪ್ರಕರಣಗಳಲ್ಲಿ 176 ಮಂದಿ ಮಹಾರಾಷ್ಟ್ರದಿಂದ ಬಂದವರೇ ಆಗಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮುಂಬೈನಿಂದ 247 ಮಂದಿ ಬಂದಿದ್ದು, ಅವರಲ್ಲಿ 47ಮಂದಿ ಸೋಂಕಿತರಾಗಿದ್ದಾರೆ. ಇದರಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.

ಮಂಡ್ಯದಲ್ಲಿ ಹೊಸದಾಗಿ ಸೋಂಕಿತರಾದ (8 ಮಂದಿ) ಎಲ್ಲರೂ ಮಹಾರಾಷ್ಟ್ರದಿಂದ ಬಂದವರೇ ಆಗಿದ್ದಾರೆ. ಹಾಸನದಲ್ಲಿ ವರದಿಯಾದ 14 ಪ್ರಕರಣಗಳಿಗೂ ಮಹಾರಾಷ್ಟ್ರದ ನಂಟಿದೆ. ತುಮಕೂರಿನಲ್ಲಿ 6 ಮಂದಿ ಮುಂಬೈಗೆ ಪ್ರಯಾಣ ಮಾಡಿದ ಇತಿಹಾಸ ಹೊಂದಿದ್ದಾರೆ. ಉಳಿದವರಿಗೆ ರೋಗಿಗಳ ಸಂಪರ್ಕದಿಂದ ಸೋಂಕು ತಗುಲಿದೆ. ವಿಜಯಪುರದಲ್ಲಿ ಕಂಟೈನ್‌ಮೆಂಟ್ ಪ್ರದೇಶದ ನಿವಾಸಿಗಳಿಗೆ ಸೋಂಕು ತಗುಲಿದೆ.

ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಇಲ್ಲ


ಒಂದು ಜಿಲ್ಲೆಯಿಂದ ಮತ್ತೊಂದು ಜೆಲ್ಲೆಗೆ ಸಂಚರಿಸುವವರಿಗೆ ಚೆಕ್‌ಪೋಸ್ಟ್‌ಗಳಲ್ಲಿ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿತ್ತು. ಆರೋಗ್ಯ ಇಲಾಖೆಯ ಆಯುಕ್ತರು ಈ ನಿಯಮವನ್ನು ಸಡಿಲಿಸಿ, ಸುತ್ತೋಲೆ ಹೊರಡಿಸಿದ್ದಾರೆ. ಇನ್ನು ಮುಂದೆ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಕೈಬಿಡಲಾಗಿದೆ.

ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಅಂತರ್ ಜಿಲ್ಲಾ ಪ್ರಯಾಣದ ಮೇಲಿನ ಕೆಲ
ವೊಂದು ನಿರ್ಬಂಧವನ್ನು ಸಡಿಲಿಸಲಾಗಿದೆ. ರಾಜ್ಯದ ಯಾವುದೇ ಚೆಕ್‌ಪೋಸ್ಟ್‌ಗಳಲ್ಲಿ ಇನ್ನು ಮುಂದೆ ತಪಾಸಣೆ ನಡೆಸುವುದಿಲ್ಲ. ಬಸ್‌, ರೈಲುಗಳ ಪ್ರಯಾಣಿಕರಿಗೆ ‍ಪ್ರಯಾಣಿ
ಸುವ ಮೊದಲೇ ಪರೀಕ್ಷೆ ಮಾಡಲಾಗುತ್ತದೆ. ಸೋಂಕಿನ ಲಕ್ಷಣಗಳು ಕಂಡಬಂದಲ್ಲಿ ಫಿವರ್‌ ಕ್ಲಿನಿಕ್‌ಗಳಿಗೆ ಕಳುಹಿಸಲಾಗುತ್ತದೆ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಸೀಲ್‌ಡೌನ್

ಬಿಬಿಎಂಪಿ 136ನೇ ವಾರ್ಡ್‌ನ ವಿನಾಯಕನಗರದ ವ್ಯಕ್ತಿಯೊಬ್ಬರಲ್ಲಿ ಕೋವಿಡ್–19 ದೃಢಪಟ್ಟಿರುವ ಕಾರಣ ಈ ಬಡಾವಣೆಯ 2ನೇ ಕ್ರಾಸ್‌ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.

ಸೋಂಕಿತ ವ್ಯಕ್ತಿಯ ಜತೆ 8 ಜನರನ್ನು ಪ್ರಾಥಮಿಕ ಸಂಪರ್ಕ, 6 ಮಂದಿಯನ್ನು ದ್ವಿತೀಯ ಸಂಪರ್ಕಿತರು ಎಂದು ಗುರುತಿಸಲಾಗಿದೆ.

ಈ ಮನೆಯ ಮಾಲೀಕರ ಕುಟುಂಬವನ್ನು ದ್ವಿತೀಯ ಸಂಪರ್ಕಿತರು ಎಂದು ಪರಿಗಣಿಸಿ ಕ್ವಾರಂಟೈನ್ ಮಾಡಲಾಗಿದೆ. ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್, ಸೀಲ್‌ಡೌನ್ ಪ್ರದೇಶದಲ್ಲಿ ಸಂಚಾರ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪಾದರಾಯನಪುರದಲ್ಲಿ ಈವರೆಗೆ 430 ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಅವರಲ್ಲಿ 190 ಮಂದಿಯ ವರದಿ ನೆಗೆಟಿವ್ ಬಂದಿದೆ. ಉಳಿದವರ ವರದಿ ಬರಬೇಕಿದೆ’ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಕ್ಯಾನ್ಸರ್ ಪೀಡಿತ ಮಹಿಳೆ ಸೇರಿದಂತೆ ಐವರಿಗೆ ಸೋಂಕು

ಕ್ಯಾನ್ಸರ್ ರೋಗಿ, ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ ಐದು ಮಂದಿ ಶುಕ್ರವಾರ ಕೊರೊನಾ ಸೋಂಕಿತರಾಗಿದ್ದು, ನಗರದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ.

ನಗರದ ಪಾದರಾಯನಪುರದಲ್ಲಿ ಒಂದೇ ಸಮನೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅಲ್ಲಿ ಹೊಸದಾಗಿ ಎರಡು ಪ್ರಕರಣಗಳು ವರದಿಯಾಗಿವೆ. 706ನೇ ರೋಗಿಯ ಸಂಪರ್ಕದಿಂದ 42 ವರ್ಷದ ಪುರುಷ ಹಾಗೂ 52 ವರ್ಷದ ವ್ಯಕ್ತಿ ಸೋಂಕಿತರಾಗಿದ್ದಾರೆ. ಇದರಿಂದಾಗಿ ಪಾದರಾಯನಪುರದಲ್ಲಿ ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.

ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ 36 ವರ್ಷದ ಮಹಿಳೆಗೂ ಸೋಂಕು ತಗುಲಿದೆ. ಮಿಷನ್ ರಸ್ತೆಯ ಎಚ್‍ಸಿಜಿ ಆಸ್ಪತ್ರೆಯಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಕ್ಯಾನ್ಸರ್ ಚಿಕಿತ್ಸೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿತ್ತು. ಚಿಕಿತ್ಸೆ ವೇಳೆ ಕೊರೊನಾ ಪರೀಕ್ಷೆಯನ್ನೂ ಮಾಡಲಾಗಿತ್ತು. ಈ ವೇಳೆ ಸೋಂಕಿತರಾಗಿರುವುದು ವರದಿಯಿಂದ ಖಚಿತಪಟ್ಟಿದೆ. ರಾಮನಗರದ ಈ ಮಹಿಳೆ, ಕೆಲ ವಾರಗಳ ಹಿಂದೆ ಪತಿಯೊಂದಿಗೆ ಲಕ್ಕಸಂದ್ರದಲ್ಲಿರುವ ತಂಗಿಯ ಮನೆಗೆ ಬಂದಿದ್ದರು. ಮಹಿಳೆಗೆ ಚಿಕಿತ್ಸೆ ನೀಡುವ ವೈದ್ಯರು ವೈಯಕ್ತಿಕ ಸುರಕ್ಷಾ ಸಾಧನವನ್ನು (ಪಿಪಿಇ ಕಿಟ್) ಧರಿಸಿದ್ದರು.

ಖಾಸಗಿ ಕ್ಲಿನಿಕ್‌ಗೆ ಬೀಗ: ಆಸ್ಟಿನ್ ಟೌಟ್‌ನ 42 ವರ್ಷದ ಮಹಿಳೆಗೆ ಸೋಂಕು
ತಗುಲಿದೆ. ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ (ಐಎಲ್‌ಐ)
ಬಳಲುತ್ತಿದ್ದ ಅವರು, ಅಲ್ಲಿನ ಖಾಸಗಿ ಕ್ಲಿನಿಕ್‌ಗೆ ತೆರಳಿ ತಪಾಸಣೆ ಮಾಡಿಸಿ
ಕೊಂಡಿದ್ದರು. ಹೆಚ್ಚಿನ ತಪಾಸಣೆಗೆ ಸಾಗರ್ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ
ಮಹಿಳೆಯ ಗಂಟಲ ದ್ರವದ ಮಾದರಿ ಪರೀಕ್ಷಿಸಿದಾಗ ಸೋಂಕು ದೃಢಪಟ್ಟಿದೆ.
ಮಹಿಳೆಯೊಂದಿಗೆ ನೇರ ಸಂಪರ್ಕದಲ್ಲಿದ್ದ 5 ಹಾಗೂ ಪರೋಕ್ಷ ಸಂಪರ್ಕದ
ಲ್ಲಿದ್ದ 14 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಖಾಸಗಿ ಕ್ಲಿನಿಕ್‌ಗೆ ಬೀಗ ಹಾಕಿ, ವೈದ್ಯರು ಹಾಗೂ ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಮಹಿಳೆಗೆ ಕೊರೊನಾ ಸೋಂಕು(ದಾಬಸ್ ಪೇಟೆ): ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ವೀರಸಾಗರ ಗ್ರಾಮದ 55 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT