ಗುರುವಾರ , ಆಗಸ್ಟ್ 6, 2020
24 °C
ತೀವ್ರ ನಿಗಾ ಘಟಕದಲ್ಲಿ 532 ಮಂದಿ

ರಾಜ್ಯದಲ್ಲಿ ಒಂದೇ ದಿನ 2,627 ಮಂದಿಗೆ ಸೋಂಕು; 48 ಗಂಟೆಗಳಲ್ಲಿ 141 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲಿದವರಲ್ಲಿ ಮತ್ತೆ 71 ಮಂದಿ ಭಾನುವಾರ ಮೃತಪಟ್ಟಿದ್ದಾರೆ. ಇದರಿಂದಾಗಿ ಕೋವಿಡ್‌ನಿಂದ ರಾಜ್ಯದಲ್ಲಿ ಸಾವಿಗೀಡಾದವರ ಸಂಖ್ಯೆ 684ಕ್ಕೆ ತಲುಪಿದೆ. 

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಹೊಸದಾಗಿ 2,627 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಪರಿಣಾಮ ಸೋಂಕಿತರ ಸಂಖ್ಯೆ 38,843ಕ್ಕೆ ಏರಿಕೆಯಾಗಿದೆ. ಕೇವಲ 48 ಗಂಟೆಗಳಲ್ಲಿ 5,425 ಮಂದಿಗೆ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ 141 ಮಂದಿ ಕೋವಿಡ್‌ನಿಂದ ಮೃತಪಟ್ಟಿರುವುದು ಖಚಿತಪಟ್ಟಿದೆ. ಇನ್ನೊಂದೆಡೆ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಸದ್ಯ 532 ಮಂದಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಳ ಮಾಡಲಾಗುತ್ತಿದೆ. ಒಂದೇ ದಿನ 20,050 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸದ್ಯ ರಾಜ್ಯದಲ್ಲಿ ಮರಣ ಪ್ರಮಾಣ ಶೇ 1.76 ರಷ್ಟಿದೆ. ಈ ಪ್ರಮಾಣ ಬೆಂಗಳೂರಿನಲ್ಲಿ ಶೇ 1.37 ರಷ್ಟಿದೆ. ಬೆಂಗಳೂರಿನಲ್ಲಿ 206 ಸೇರಿದಂತೆ 693 ಮಂದಿ ಒಂದೇ ದಿನ ಗುಣಮುಖರಾಗಿದ್ದಾರೆ.

16 ದಿನಗಳ ಮಗು ಸಾವು: ಬೆಂಗಳೂರಿನಲ್ಲಿ 45 ಮಂದಿ, ದಕ್ಷಿಣ ಕನ್ನಡದಲ್ಲಿ 5, ಮೈಸೂರು, ಹಾಸನ, ದಾವಣಗೆರೆ ಹಾಗೂ ಬೆಳಗಾವಿಯಲ್ಲಿ ತಲಾ 3 ಮಂದಿ, ಬಾಗಲಕೋಟೆ, ಹಾವೇರಿಯಲ್ಲಿ ತಲಾ ಇಬ್ಬರು, ಕೊಪ್ಪಳ, ತುಮಕೂರು, ಚಾಮರಾಜನಗರ, ವಿಜಯಪುರ ಹಾಗೂ ಧಾರವಾಡದಲ್ಲಿ ತಲಾ ಒಬ್ಬರು ಕೋವಿಡ್‌ಗೆ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 16 ದಿನಗಳ ಮಗು ಹಾಗೂ 17 ವರ್ಷದ ಬಾಲಕಿ ಸಾವಿಗೀಡಾಗಿದ್ದಾರೆ. ಉಳಿದಂತೆ ಮೃತಪಟ್ಟವರಲ್ಲಿ ಬಹುತೇಕರು 50 ವರ್ಷ ಮೇಲ್ಪಟ್ಟವರಾಗಿದ್ದು, ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು.

ಬೆಂಗಳೂರಿನಲ್ಲಿ ಗರಿಷ್ಠ ಪ್ರಕರಣಗಳು ವರದಿಯಾಗಿದ್ದು, ಮತ್ತೆ 1,525 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು