Covid-19 Karnataka Update: 8 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆ

ಬೆಂಗಳೂರು: ಮೇ 4ರ ಸಂಜೆ 5ರಿಂದ ಮೇ 5ರ ಮಧ್ಯಾಹ್ನ 12ಗಂಟೆವರೆಗೂ ರಾಜ್ಯದಲ್ಲಿ 8 ಕೋವಿಡ್–19 ದೃಢಪಟ್ಟ ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 659ಕ್ಕೆ ಏರಿಕೆಯಾಗಿದ್ದು, ಒಟ್ಟು ಸೋಂಕು ಪ್ರಕರಣಗಳ ಪೈಕಿ 28 ಮಂದಿ ಸಾವಿಗೀಡಾಗಿದ್ದು, 324 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಪೈಕಿ ಬೆಂಗಳೂರು ನಗರದಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಇನ್ನುಳಿದಂತೆ ಬಾಲಗಕೋಟೆಯಲ್ಲಿ 2, ಬಳ್ಳಾರಿ 1, ದಕ್ಷಿಣ ಕನ್ನಡದಲ್ಲಿ 1 ಮತ್ತು ಉತ್ತರ ಕನ್ನಡದ ಭಟ್ಕಳದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.