ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | 130 ಹೊಸ ಪ್ರಕರಣ, ಸೋಂಕಿತರು 2,089ಕ್ಕೆ ಏರಿಕೆ

Last Updated 24 ಮೇ 2020, 12:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮೇ 23ರ ಸಂಜೆ 5ರಿಂದ ಮೇ 24ರ ಸಂಜೆ 5 ಗಂಟೆವರೆಗೆ 130 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಆ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ, 2,089ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೋವಿಡ್‌–19 ಸೋಂಕಿನಿಂದಾಗಿ ಇದುವರೆಗೂ 42 ಜನರು ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 654 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 1,391ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರ 1,ಮಂಡ್ಯ 15, ಕಲಬುರಗಿ 6, ಚಿಕ್ಕಬಳ್ಳಾಪುರ 27, ದಾವಣಗೆರೆ 4, ಯಾದಗಿರಿ 24, ಹಾಸನ 14, ಬೀದರ್ 6, ಉಡುಪಿ 23, ವಿಜಯಪುರ 1, ಉತ್ತರ ಕನ್ನಡ 2, ದಕ್ಷಿಣ ಕನ್ನಡ 1, ಧಾರವಾಡ 1, ಶಿವಮೊಗ್ಗ 2, ತುಮಕೂರು 2 ಮತ್ತು ಕೊಡಗು ಜಿಲ್ಲೆಯಲ್ಲಿ1 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT