ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | 14 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಒಂದೇ ದಿನ ರಾಜ್ಯದಲ್ಲಿ 1,105; ಬೆಂಗಳೂರಿನಲ್ಲಿ 738 ಪ್ರಕರಣ
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಭಾನುವಾರ ಸಂಜೆ 5ರಿಂದ ಸೋಮವಾರ ಸಂಜೆ 5 ಗಂಟೆ ವರೆಗೆ 1,105 ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು, ಅಂದರೆ 738 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 19 ಸಾವು ಸಂಭವಿಸಿದೆ. ಇದರೊಂದಿಗೆ ಸಾವಿನ ಸಂಖ್ಯೆ 226ಕ್ಕೆ ಏರಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 14,295 ಜನರಿಗೆ ಸೋಂಕು ತಗುಲಿದ್ದು ಅದರಲ್ಲಿ, 7,683 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ, 6,382 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. 268 ಸೋಂಕಿತರು ಐಸಿಯುನಲ್ಲಿದ್ದಾರೆ.

ಇಂದು 176 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿಸೋಂಕಿತರ ಸಂಖ್ಯೆ 4,052ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 91ಕ್ಕೆ ಏರಿದೆ. 533 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನೂ 3,427ಪ್ರಕರಣಗಳು ಸಕ್ರಿಯವಾಗಿವೆ.

ಉಳಿದಂತೆ ಬಳ್ಳಾರಿಯಲ್ಲಿ 76,ದಕ್ಷಿಣ ಕನ್ನಡದಲ್ಲಿ 32, ಬೀದರ್‌ನಲ್ಲಿ 28, ಉತ್ತರ ಕನ್ನಡದಲ್ಲಿ 24, ಕಲಬುರಗಿಯಲ್ಲಿ 23, ವಿಜಯಪುರ–ಹಾಸನದಲ್ಲಿ ತಲಾ 22, ತುಮಕೂರು–ಉಡುಪಿಯಲ್ಲಿ ತಲಾ 18, ಧಾರವಾಡ–ಚಿಕ್ಕಮಗಳೂರಿನಲ್ಲಿ ತಲಾ 17, ಚಿಕ್ಕಬಳ್ಳಾಪುರದಲ್ಲಿ 15, ಯಾದಗಿರಿಯಲ್ಲಿ 9, ಮಂಡ್ಯದಲ್ಲಿ 8, ಮೈಸೂರಿನಲ್ಲಿ 6, ಶಿವಮೊಗ್ಗದಲ್ಲಿ 5, ರಾಯಚೂರು–ಬಾಗಲಕೋಟೆ–ಗದಗ ಮತ್ತು ಕೋಲಾರದಲ್ಲಿ ತಲಾ 4, ಬೆಂಗಳೂರು ಗ್ರಾಮಾಂತರದಲ್ಲಿ 3, ದಾವಣಗೆರೆ–ರಾಮನಗರ–ಚಿತ್ರದುರ್ಗದಲ್ಲಿ ತಲಾ 2, ಹಾವೇರಿ ಮತ್ತು ಕೊಡಗಿನಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT