ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಭೀತಿ: ಕಲಬುರ್ಗಿ ರೈಲು ನಿಲ್ದಾಣದಲ್ಲೂ ಸ್ಕ್ರೀನಿಂಗ್ ಶುರು

Last Updated 14 ಮಾರ್ಚ್ 2020, 7:38 IST
ಅಕ್ಷರ ಗಾತ್ರ

ಕಲಬುರ್ಗಿ: ಕೊರೊನಾವೈರಸ್ ಸೋಂಕು ತಗುಲುವ ಭೀತಿಯ ಹಿನ್ನೆಲೆಯಲ್ಲಿ ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಸ್ಕ್ರೀನಿಂಗ್ ಮಾಡಲಾಗುತ್ತಿದೆ.

ಕಲಬುರ್ಗಿಯಲ್ಲಿ ವೃದ್ಧರೊಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು ದೃಢಪಟ್ಟ ನಂತರ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿದಿದೆ. ಶುಕ್ರವಾರ ಇಡೀ ನಗರದಲ್ಲಿ ಆತಂಕದ ಛಾಯೆ ಆವರಿಸಿತ್ತು.

ಇದರಿಂದ ಎಚ್ಚೆತ್ತುಕೊಂಡ ಸ್ಥಳೀಯ ರೈಲ್ವೆ ಅಧಿಕಾರಿಗಳು ಶನಿವಾರ ತುರ್ತು ಕ್ರಮ ಕೈಗೊಂಡು ತಪಾಸಣೆ ಆರಂಭಿಸಿದ್ದಾರೆ.

ಮೊದಲು ರೈಲ್ವೆ ಅಧಿಕಾರಿಗಳೇ ಸ್ಕ್ರೀನಿಂಗ್ ಮಾಡಿಸಿಕೊಳ್ಳುವ ಮೂಲಕ ಪ್ರಯಾಣಿಕರಲ್ಲಿ ವಿಶ್ವಾಸ ಮೂಡಿಸಿದರು.

ರೈಲ್ವೆ ನಿಲ್ದಾಣದ ನೆಲ, ಆಸನಗಳು, ಕುಳಿತುಕೊಳ್ಳುವ ಕಟ್ಟೆ, ಟಿಕೇಟ್ ಕೌಂಟರಿನ ಗ್ರಿಲ್, ಡೆಸ್ಕ್, ತುರ್ತು ಟಿಕೇಟ್ ನೀಡುವ ಯಂತ್ರ ಸೇರಿದಂತೆ ಇಡೀ ನಿಲ್ದಾಣದ ಇಂಚಿಂಚೂ ಬಿಡದಂತೆ ಸ್ವಚ್ಛಗೊಳಿಸಲಾಯಿತು.

ಮೈಕಿನಲ್ಲಿ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೈಲ್ವೆ ನಿಲ್ದಾಣದ ಮ್ಯಾನೇಜರ್ ಎ.ಎಸ್. ಪ್ರಸಾದರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT